ಧಾರವಾಡ: ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳ ಕುರಿತು ನ. 16ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಧಾರವಾಡ ಗ್ರಾಮೀಣ ಉಪ ವಿಭಾಗ ಕಚೇರಿ ಮತ್ತು ಕಲಘಟಗಿ ಉಪವಿಭಾಗ ಕಚೇರಿಯಲ್ಲಿ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದೆ. ಜನರು ಸಭೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.