ಕುಂದುಕೊರತೆ ನಿವಾರಣೆ ಸಭೆ ಡಿ. 15ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಬೆಳಗಾವಿ ನಗರದ ಮರಾಠಾ ಲೈನ್​ ಇನ್ಫೆಂಟ್ರಿ, ಶಿವಾಜಿ ಸ್ಟೇಡಿಯಂನಲ್ಲಿ ಡಿ. 15ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4ರವರೆಗೆ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಕುಂದುಕೊರತೆಗಳ ನಿವಾರಣಾ ಶಿಬಿರ ಆಯೋಜಿಸಲಾಗಿದೆ.

ಶಿಬಿರದಲ್ಲಿ ಮಾಜಿ ಸೈನಿಕರ ನಿವೃತ್ತಿ ಪಿಂಚಣಿ, ಕುಟುಂಬ ಪಿಂಚಣಿಗೆ ಸಂಬಂಧಿಸಿದ ವಿಷಯಗಳ ಕುರಿತು ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಶಿಬಿರದಲ್ಲಿ ಪಾಲ್ಗೊಳ್ಳುವ ಫಲಾನುಭವಿಗಳು ತಮ್ಮ ಸಮಸ್ಯೆ ಕುರಿತು ಹೆಸರುಗಳನ್ನು ನೊಂದಾಯಿಸಿಕೊಂಡು, ನೋಂದಣಿ ಸಂಖ್ಯೆ ಪಡೆಯ ಬೇಕು. ಶಿಬಿರದಲ್ಲಿ ಧಾರವಾಡ, ಗದಗ, ಹಾವೇರಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ಪಾಲ್ಗೊಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net