

ತೀರ್ಥಹಳ್ಳಿ: ಸಂಸಾರದ ಹೊಣೆ ಹೊತ್ತ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ಉಪಯುಕ್ತವಾಗಿದೆ ಎಂದು ಪಪಂ ಅಧ್ಯಕ್ಷೆ ಸುಶೀಲಾ ಶೆಟ್ಟಿ ಹೇಳಿದರು. ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಮಾಡಿದ ಘೋಷಣೆಯಂತೆ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದ್ದು ಬಡತನದ ರೇಖೆಗಿಂತ ಕೆಳವರ್ಗದ ಮಹಿಳೆಯರಲ್ಲಿ ಭರವಸೆಯನ್ನೂ ಮೂಡಿಸಿದೆ ಎಂದರು. ಪಪಂ ಉಪಾಧ್ಯಕ್ಷ ರಹಮತ್ ಉಲ್ಲಾ ಅಸಾದಿ ಮಾತನಾಡಿ, ಈ ಯೋಜನೆಯ ಲಾನುಭವಿಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಪಟ್ಟಣದಲ್ಲಿ ಗೋಪಾಲಗೌಡ ರಂಗಮಂದಿರ ಹಾಗೂ ಬೆಟ್ಟಮಕ್ಕಿ ಬಡಾವಣೆಯಲ್ಲಿ ನೋಂದಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದರು. ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಸದಸ್ಯರಾದ ಸೊಪ್ಪುಗುಡ್ಡೆ ರಾಘವೇಂದ್ರ, ಸಂದೇಶ್ ಜವಳಿ, ಮಂಜುಳಾ ನಾಗೇಂದ್ರ, ಶಬನಂ, ಮುಖ್ಯಾಧಿಕಾರಿ ಕುರಿಯಾಕೋಸ್ ಇದ್ದರು.