ಗೃಹಲಕ್ಷ್ಮೀ ಉದ್ಘಾಟನೆ ಪ್ರಚಾರಗೊಳ್ಳಲಿ

25Manju8
ಬೆಳಗಾವಿ ತಾಪಂ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ರಾಜೇಶ ದಾನವಾಡಕರ ಮಾತನಾಡಿದರು. ನಾಗರಾಜ ಆರ್., ರಾಜೇಂದ್ರ ಮೊರಬದ, ಗಣೇಶ ಕೆ.ಎಸ್.ಇತರರಿದ್ದರು.
Published on

ಬೆಳಗಾವಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಆ.30ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಗ್ರಾಪಂಗಳಲ್ಲಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಬೆಳಗಾವಿ ತಾಪಂ ಇಒ ರಾಜೇಶ ದಾನವಾಡಕರ ತಿಳಿಸಿದರು.

ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಬೇಕು. ಗ್ರಾಪಂ ಮಟ್ಟದಲ್ಲಿ ಎಲ್‌ಇಡಿ ಟಿವಿ ಮೂಲಕ ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆ ಮಾಡಬೇಕು. ಬ್ಯಾನರ್ ಅಳವಡಿಸಬೇಕು ಎಂದು ಪಿಡಿಒಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಭಾಗವಹಿಸುವುದರಿಂದ ರಂಗೋಲಿ ಸ್ಪರ್ಧೆ ಸೇರಿ ಇತರ ಯಾವುದಾದರೂ ಸ್ಪರ್ಧೆ ಏರ್ಪಡಿಸಬೇಕು. ಕಾರ್ಯಕ್ರಮದ ವಿಡಿಯೋ ಹಾಗೂ ಛಾಯಾಚಿತ್ರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಎಂದು ಸಲಹೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜ ಆರ್., ಸಹಾಯಕ ನಿರ್ದೇಶಕ (ಗ್ರಾ.ಉ) ರಾಜೇಂದ್ರ ಮೊರಬದ, ಸಹಾಯಕ ನಿರ್ದೇಶಕ (ಪ.ರಾ) ಗಣೇಶ ಕೆ.ಎಸ್.ಹಾಗೂ ಪಿಡಿಒಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net