ಮಹಿಳೆಯರಿಗೆ ವರದಾನವಾದ ಗೃಹಲಕ್ಷ್ಮಿ

30 hlr1 GRUHA LAXMI
Published on

ಹೊಳೆಆಲೂರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಸಾಮಾಜಿಕವಾಗಿ, ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರಿಗೆ ವರದಾನವಾಗಿದ್ದು, ಮಹಿಳಾ ಶಕ್ತಿಯನ್ನು ಸಬಲೀಕರಣಗೊಳಿಸುವ ದೂರದೃಷ್ಠಿಕೋನ ಹೊಂದಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ ಬಜೇಂತ್ರಿ ಹೇಳಿದರು.
ಗ್ರಾಮದ ಗ್ರಾಪಂ ಸಭಾಭವನದಲ್ಲಿ ಗ್ರಾಪಂ, ಹೊಳೆಆಲೂರ ಹಾಗೂ ವಿವಿಧ ಮಹಿಳಾ ಸಂಘಟನೆಗಳ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅನುಷ್ಟಾನಗೊಳಿಸಿರುವ ಯೋಜನೆಯಲ್ಲಿ ಯಾವುದೇ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿಲ್ಲ. ತಾಂತ್ರಿಕ ಕಾರಣ ಹಾಗೂ ದಾಖಲೆ ಸಲ್ಲಿಕೆಯ ಕೊರತೆಯಿಂದ ಕೆಲ ಫಲಾನುಭವಿಗಳಿಗೆ ಸದ್ಯ ಯೋಜನೆ ತಲುಪದಿರಬಹುದು. ಆದರೆ, ಮುಂಬರುವ ದಿನಗಳಲ್ಲಿ ಸೂಕ್ತ ದಾಖಲೆಗಳನ್ನು ಒದಗಿಸಿ ಯೋಜನೆಯ ಲಾಭ ಪಡೆದುಕೊಳ್ಳಬಹುದು. ಸ್ಥಳಿಯ ಮಟ್ಟದಲ್ಲಿ ಜನಪ್ರತಿನಿಧಿಗಳು ಜನರಿಗೆ ತಿಳಿವಳಿಕೆ ನೀಡಿ ಎಲ್ಲರಿಗೂ ತಲುಪಿಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.
ಮಹಿಳೆಯರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ವಿತರಿಸಿ ಸಂಭ್ರಮಿಸಿದರು. ಪಿಡಿಒ ಬಸವರಾಜ ಗಿರಿತಮ್ಮನ್ನವರ, ಗ್ರಾಪಂ ಸದಸ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ವಿವಿಧ ಮಹಿಳಾ ಸಂಘಟನೆಯ ಪದಾಧಿಕಾರಿಗಳು, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net