ಎಲ್ಲ ಗ್ರಾಪಂಗಳಲ್ಲಿ ಗೃಹಲಕ್ಷ್ಮೀ ಕಾರ್ಯಕ್ರಮದ ಲೈವ್‌

DC-Meeting
Published on

ಕಾರವಾರ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಚಾಲನೆ ನೀಡಲಿದ್ದಾರೆ.

ಅದರ ನೇರ ಪ್ರಸಾರ ಕಾರ್ಯಕ್ರಮವನ್ನು ಎಲ್ಲ ಗ್ರಾಪಂ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹೇಳಿದರು.
ಜಿಲ್ಲಾಧಿಕಾರಿ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ಯೋಜನೆಯ ಪೂರ್ವಭಾವಿ ಸಭೆಯಲ್ಲಿ ಶುಕ್ರವಾರ ಅವರು ಮಾತನಾಡಿದರು. ಜಿಲ್ಲೆಯ ಸುಮಾರು 2 ಲಕ್ಷ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲು ಈಗಾಗಲೇ ಅನುದಾನ ಜಿಲ್ಲೆಗೆ ಬಿಡುಗಡೆಯಾಗಿದೆ ಎಂದರು.

ಎಲ್ಲೆಡೆ ಎಲ್‌ಇಡಿ ವಾಲ್, ಸ್ಕ್ರೀನ್ ವ್ಯವಸ್ಥೆ, ಧ್ವನಿವರ್ಧಕ ಅಳವಡಿಸಬೇಕು. ಇದರ ನಿರ್ವಹಣೆಗೆ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಬೇಕು. ತಹಸೀಲ್ದಾರ್, ಸಿಡಿಪಿಒ ಅವರ ಮೇಲುಸ್ತುವಾರಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ನೋಡಲ್ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಇದನ್ನೂ ಓದಿ:ಕಟ್ಟಿದ ಗೂಡು ತೊರೆದು ಹೋದ ಬೆಳ್ಳಕ್ಕಿಗಳು
ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಮಾತನಾಡಿ, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಸೇರಿಸಬೇಕು ಎಂದರು. ಎಸಿಗಳಾದ ಜಯಲಕ್ಷ್ಮೀ ರಾಯಕೋಡ, ದೇವರಾಜ್, ಕಲ್ಯಾಣಣಿ ಕಾಂಬಳೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಡಾ.ಹುಲಿಗೆಮ್ಮ.ಎಚ್. ಕುಕನೂರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net