ಗೃಹಲಕ್ಷ್ಮೀ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಿ

gruha laxmi
ಗೃಹಲಕ್ಷ್ಮೀ ಯೋಜನೆ ಜಾರಿ ಹಿನ್ನೆಲೆಯಲ್ಲಿ ದೇವದುರ್ಗ ತಾಲೂಕು ನಾಗಡದಿನ್ನಿ ಅಂಗನವಾಡಿ ಕೇಂದ್ರದ ಮುಂದೆ ಕಾರ್ಯಕರ್ತರು ರಂಗೋಲಿ ಬಿಡಿಸಿದರು. ಕಾರ್ಯಕರ್ತೆಯರಾದ ನಿರ್ಮಲಾ ಪಾಟೀಲ್, ಅನುಸೂಯ, ದುರುಗಮ್ಮ ನಾಯಕ, ಆಸೀಮ್ ಬೀ, ಕವಿತಾ, ಗೌರಮ್ಮ ಯರಮರಸ್ ಇದ್ದರು.
Published on

ದೇವದುರ್ಗ: ರಾಜ್ಯ ಸರ್ಕಾರ ಯೋಜನೆಯಾದ ಗೃಹಲಕ್ಷ್ಮೀ ಆ.30ರಂದು ಪ್ರಾರಂಭವಾಗಲಿದ್ದು, ಎಲ್ಲ ಅಂಗನವಾಡಿ ಕಾರ್ಯಕರ್ತರು ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಮದುರ್ಗ ವಲಯ ಮೇಲ್ವಿಚಾರಕಿ ಶರಣಮ್ಮ ರಾಠೋಡ್ ಹೇಳಿದರು.

ತಾಲೂಕಿನ ನಾಗಡದಿನ್ನಿ ಅಂಗನವಾಡಿ ಕೇಂದ್ರದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಅಂಗನವಾಡಿ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಂಗಳವಾರ ಮಾತನಾಡಿದರು.

ಮಹಿಳೆಯರ ಆರ್ಥಿಕ ಸಬಲೀಕರಣ ಉದ್ದೇಶದಿಂದ ಕುಟುಂಬದ ಯಜಮಾನಿಗೆ ಪ್ರತಿತಿಂಗಳು 2000 ರೂ. ನೀಡಲಾಗುತ್ತಿದೆ. ಈಗಾಗಲೇ ಯೋಜನೆಯ ಫಲಾನುಭವಿಗಳ ಹೆಸರು ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದೆ.

ಪ್ರತಿಗ್ರಾಪಂ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ ಮಹಿಳೆಯರಿಗೆ ಜಾಗೃತಿ ಮೂಡಿಸುವ ಜತೆಗೆ ಯೋಜನೆಗೆ ಚಾಲನೆ ನೀಡಲಾಗುವುದು. ಕಾರ್ಯಕರ್ತೆಯರು ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಬೇಕು ಎಂದರು.

ನಾಗಡದಿನ್ನಿ ಗ್ರಾಪಂ ವ್ಯಾಪ್ತಿಯ ಕಾರ್ಯಕ್ರಮವನ್ನು ನೀಲಗಲ್ ಗ್ರಾಮದಲ್ಲಿ ಆಯೋಜಿಸಲಾಗಿದೆ. ಮೈಸೂರಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಜರುಗಲಿದ್ದು, ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಿಕೆ ಶಿವಕುಮಾರ ಆನ್‌ಲೈನ್ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮ ವೀಕ್ಷಣೆಗೆ ಎಲ್‌ಇಡಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಕಾರ್ಯಕರ್ತೆಯರಾದ ನಿರ್ಮಲಾ ಪಾಟೀಲ್, ಅನುಸೂಯ, ದುರುಗಮ್ಮ ನಾಯಕ, ಆಸೀಮ್ ಬೀ, ಕವಿತಾ, ಗೌರಮ್ಮ ಯರಮರಸ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net