

ವಿಜಯನಗರ ಜಿಲ್ಲಾಡಳಿತದಿAದ ಅಗತ್ಯ ಸಿದ್ಧತೆ: ಎಂ.ಎಸ್.ದಿವಾಕರ
ಹೊಸಪೇಟೆ: ರಾಜ್ಯ ಸರ್ಕಾರದ “ಗೃಹಲಕ್ಷ್ಮಿ” ಯೋಜನೆಯಡಿ ನೊಂದಣಿ ಪ್ರಕ್ರಿಯೆ ಗುರುವಾರದಿಂದ ಜಿಲ್ಲೆಯಲ್ಲಿ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಅರ್ಜಿದಾರರು ನೋಂದಾಯಿಸಲು ಅವಕಾಶವಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ೧೩೦ ಗ್ರಾಮ-ಒನ್ ಕೇಂದ್ರಗಳು, ೬ ಕರ್ನಾಟಕ ಒನ್ ಕೇಂದ್ರಗಳು, ೧೩೭ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನಗರ ಪ್ರದೇಶದಲ್ಲಿ ೨೫ ಗೃಹಲಕ್ಷ್ಮಿ ಯೋಜನೆ ನೋಂದಣಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಆಸಕ್ತರು ಸಂಬAಧಿಸಿದ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪಡಿತರ ಚೀಟಿಯಲ್ಲಿ `ಯಜಮಾನಿ ಮಹಿಳೆ' ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಲಿದ್ದು, ಫಲಾನುಭವಿ ಯಜಮಾನಿ ಮಹಿಳೆಯ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ ಪಾವತಿದಾರರಾಗಿದ್ದಲ್ಲಿ ಯೋಜನೆ ಅನ್ವಯಿಸುವುದಿಲ್ಲ. ಫಲಾನುಭವಿಗೆ ನೊಂದಣಿಯ ದಿನಾಂಕ, ಸಮಯ ಹಾಗೂ ನೊಂದಾವಣಿ ಮಾಡಿಸುವ ಸ್ಥಳದ ವಿವರಗಳನ್ನು ಎಸ್‌ಎಂಎಸ್ ಮೂಲಕ ತಿಳಿಸಲಾಗುವುದು.
ಯೋಜನೆಯಲ್ಲಿ ಉಂಟಾಗಬಹುದಾದ ತಾಂತ್ರಿಕ ಸಮಸ್ಯೆಗಳ ನಿವಾರಣೆಗಾಗಿ ನಗರ ಪ್ರದೇಶದಲ್ಲಿ ನಿಗದಿಪಡಿಸಿರುವ ಕೇಂದ್ರಗಳಿಗೆ ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ಸಿಬ್ಬಂದಿಯನ್ನು ಮೇಲ್ವಿಚಾರಣಾ ಅಧಿಕಾರಿ ಮತ್ತು ಸಂಬAಧಪಟ್ಟ ಪೌರಾಯುಕ್ತರು, ಮುಖ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ಗ್ರಾಮ-ಒನ್, ಬಾಪೂಜಿ ಸೇವಾ ಕೇಂದ್ರಗಳಿಗೆ ಸದರಿ ಕೇಂದ್ರಗಳ ಮೇಲ್ವಿಚಾರಕರನ್ನು ಹಾಗೂ ಸಂಬAಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು, ಪ್ರತಿ ತಾಲ್ಲೂಕ ತಾಂತ್ರಿಕ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಪ್ರತಿಯಾಗಿ ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕರು(ಪ್ರಜಾಪ್ರತಿನಿಧಿ) ತಮ್ಮ ಮನೆಗಳಿಗೆ ಭೇಟಿ ನೀಡಿದಾಗ ನೊಂದಾಯಿಸಿಕೊಳ್ಳಬಹುದು. ನೋಂದಾಯಿತ ಕೇಂದ್ರಗಳ ಮೂಲಕ ಮಂಜೂರಾತಿ ಪತ್ರವನ್ನೂ ಪಡೆಯಬಹುದಾಗಿದೆ. ಫಲಾನುಭವಿ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು ೧೯೦೨ ಗೆ ಕರೆ ಮಾಡಿ ಅಥವಾ ೮೧೪೭೫೦೦೫೦೦ ನಂಬರ್‌ಗೆ ಎಸ್‌ಎಂಎಸ್ ಕಳುಹಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.