ಗೃಹಲಕ್ಷ್ಮೀ ಯೋಜನೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆ 14ರಿಂದ ಆರಂಭಿಸಲು ಚಿಂತನೆ

IMG-20230702-WA0032.jpg
Published on

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜು.14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
 ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜುಲೈ 3 ಅಥವಾ 4ರಂದು ಈ ಬಗ್ಗೆ ಘೋಷಿಸುತ್ತೇವೆ. ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇವೆ. ಸುಭದ್ರ ಸರ್ಕಾರ, ಸಮೃದ್ಧ ಕರ್ನಾಟಕವೇ ನಮ್ಮ ಗುರಿ ಎಂದರು.
 ಕಾಂಗ್ರೆಸ್ ಸರ್ಕಾರದಿಂದ ವೈಎಸ್‌ಟಿ ಸಂಗ್ರಹ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವೆ ಹೆಬ್ಬಾಳ್ಕರ್, ಕುಮಾರಸ್ವಾಮಿ ಕೂಡ ಸರ್ಕಾರ ನಡೆಸಿದ ಅನುಭವ ಇರುವವರು, ರಾಜಕೀಯ ಮುತ್ಸದ್ದಿಗಳು. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ. ಸರ್ಕಾರ ರಚನೆಯಾಗಿ ಇನ್ನೂ ಒಂದು ತಿಂಗಳು ಐದು ದಿನ. ಸರ್ಕಾರಕ್ಕೆ ಕೆಲಸ ಮಾಡಲು ಬಿಡಿ. ಜನರು ಬಹಳಷ್ಟು ಆಶಾಭಾವನೆ ಇಟ್ಟುಕೊಂಡು ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದಾರೆ. ಈಗಲೇ ನೀವು ಈ ರೀತಿ ಮಾತನಾಡಲು ಶುರು ಮಾಡಿದರೆ ತಪ್ಪಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net