

ಧಾರವಾಡ: ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ. ಕಾರ್ಯಕ್ರಮದಲ್ಲಿ ಲಾನುಭವಿಗಳೊಂದಿಗೆ ಸಂವಾದ ನಡೆಸಲು ಜಿಲ್ಲೆಯಿಂದ ಹೆಬ್ಬಳ್ಳಿ ಗ್ರಾಮ ಪಂಚಾಯಿತಿ ಸಭಾಭವನ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪರವಾಗಿ ನವಲಗುಂದ ಪಟ್ಟಣದ ಹುರಕಡ್ಲಿ ಅಜ್ಜನವರ ಕಲ್ಯಾಣ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮವನ್ನು ವೀಕ್ಷಿಸಲು ಮತ್ತು ಲಾನುಭವಿಗಳು ಭಾಗಿಯಾಗಲು ಅನುಕೂಲ ಕಲ್ಪಿಸಲಾಗಿದೆ. ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳ ವಿವಿಧ ವಾರ್ಡ್‌ಗಳಲ್ಲಿ 98 ಕಡೆಗಳಲ್ಲಿ ಮತ್ತು 145 ಗ್ರಾಮ ಪಂಚಾಯಿತಿಗಳ ಸಭಾಭವನ ಸೇರಿ ಜಿಲ್ಲೆಯ 243 ಸ್ಥಳಗಳಲ್ಲಿ ಕಾರ್ಯಕ್ರಮ ವೀಕ್ಷಿಸಲು ಟಿ.ವಿ, ಎಲ್‌ಇಡಿ ಪರದೆ ವ್ಯವಸ್ಥೆ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿರುವ 4,04,848 ಪಡಿತರ ಕಾರ್ಡ್‌ಗಳ ಪೈಕಿ 3,40,199 ಲಾನುಭವಿಗಳು (ಶೇ. 84) ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.