

ಹೊಸಪೇಟೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ನಗದು ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಆ.೩೦ರ ಜಿಲ್ಲೆಯಾದ್ಯಂತ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವಾಕರ ಎಂ.ಎಸ್. ತಿಳಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಸೇರಿದಂತೆ ತಾಲ್ಲೂಕುವಾರು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲೂ ಕಾರ್ಯಕ್ರಮ ಆಯೋಜಿಸಿ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಪ್ರಮಾಣ ಪತ್ರ ವಿತರಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾ ಮಟ್ಟದ ಮೂವರು ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.
ಅದೇ ರೀತಿ ತಾಲೂಕು ಮಟ್ಟದಲ್ಲಿ ೬ ಜನ ಅಧಿಕಾರಿಗಳು, ಪ್ರತಿ ಗ್ರಾ.ಪಂ. ಗೆ ಒಬ್ಬರಂತೆ ೧೩೭ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದ್ದು, ಮಾರ್ಗಸೂಚಿ ಅನ್ವಯ ಕಾರ್ಯಕ್ರಮ ಆಯೋಜಿಸಲು ನಿರ್ದೇಶನ ನೀಡಿದ್ದಾರೆ.