ಗೃಹಲಕ್ಷ್ಮೀ ಯೋಜನೆಗೆ ಆ.30ಕ್ಕೆ ಚಾಲನೆ

D SUDAKAR D HYR
Published on

ಚಿತ್ರದುರ್ಗ: ರಾಜ್ಯದ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ದೊರೆಯಲಿದ್ದು, ಈ ಕಾರ‌್ಯಕ್ರಮದ ನೇರ ಪ್ರಸಾರದ ವೀಕ್ಷಣೆಗೆ ಗ್ರಾಪಂ ಕೇಂದ್ರಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ಚಿತ್ರದುರ್ಗ ನಗರಸಭೆಯಿಂದ ಅಂದು ಬೆಳಗ್ಗೆ 11.30ಕ್ಕೆ ನಗರದ ತರಾಸು ರಂಗಮಂದಿರಲ್ಲಿ ಕಾರ‌್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ‌್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಇತರರು ಪಾಲ್ಗೊಳ್ಳುವರು.

3.54 ಲಕ್ಷ ನೋಂದಣಿ: ಗೃಹಲಕ್ಷ್ಮೀ ಯೋಜನೆಗೆ, ನಗರ ಪ್ರದೇಶದಲ್ಲಿ 59,310 ಹಾಗೂ ಗ್ರಾಮೀಣ ಭಾಗದಲ್ಲಿ 2,95,576 ಸೇರಿ 3,54,886 ಮಹಿಳೆಯುರು ಯೋಜನೆಗೆ ನೊಂದಾಯಿಸಿದ್ದಾರೆ. ಚಿತ್ರದುರ್ಗ ತಾಲೂಕು 82,536, ಚಳ್ಳಕೆರೆ-76,986, ಹಿರಿಯೂರು-63,565, ಹೊಳಲ್ಕೆರೆ-46,999, ಹೊಸದುರ್ಗ-50,580 ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 34,220 ಮಂದಿ ನೋಂದಾಯಿಸಿದ್ದಾರೆ. ಜಿಲ್ಲೆಯ 189 ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಕಾರ‌್ಯಕ್ರಮದ ನೇರಪ್ರಸಾರವಿರುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net