

ಉಡುಪಿ: ರಾಜ್ಯ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್‌ಗಳು ಕಾರ್ಯಾಚರಿಸುತ್ತಿದ್ದು, ಅವುಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಎಂದು ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೇಂದ್ರ ಹಾಕೆ ತಿಳಿಸಿದ್ದಾರೆ.
ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಪ್ ಮೂಲಕ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು. ಈ ರೀತಿಯಾದ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯುಕ್ತಿಕ ಮಾಹಿತಿಗಳು ಸೋರಿಕೆಗಬಹುದು. ಕರೆ ಮಾಡಿ ನೀವು ಈ ಯೋಜನೆಗೆ ಆಯ್ಕೆಯಾಗಿದ್ದಿರಿ ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಮಾಹಿತಿ ನೀಡಬಾರದು. ಸಾರ್ವಜನಿಕರು ಇಂತಹ ನಕಲಿ ಅಪ್ಲಿಕೇಷನ್‌ಗಳ ಮೂಲಕ ತಮ್ಮ ವೈಯುಕ್ತಿಕ ಆಧಾರ್, ಪ್ಯಾನ್ ಕಾರ್ಡ್ ಮಾಹಿತಿ ನೀಡಿ ಮೋಸಹೋಗಬಾರದು. ಈ ಯೋಜನೆಗಳಿಗೆ ಸಂಬAಧಿಸಿದAತೆ ಸರ್ಕಾರ ಇದುವರೆಗೂ ಯಾವುದೇ ಅಂಡ್ರಾಯ್ಡ್ ಅಪ್ಲಿಕೇಷನ್ ಅನ್ನು ಬಿಡುಗಡೆ ಮಾಡಿರುವುದಿಲ್ಲ. ಈ ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.