ದಿನಸಿ ಕಿಟ್ ವಿತರಣೆ

4CHN6
Published on

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳ ಬಳಗ ಹಾಗೂ ಭಾರತೀಯ ವಿದ್ಯಾರ್ಥಿ ಸಂಘದ ವತಿಯಿಂದ ತಾಲೂಕಿನ ಕಾಡಹಳ್ಳಿಯಲ್ಲಿ ದಿನಸಿ ಕಿಟ್ ವಿತರಿಸಲಾಯಿತು.

ವಿದ್ಯಾರ್ಥಿ ಸಂಘದ ಜಿಲ್ಲಾಧ್ಯಕ್ಷ ಮಹೇಂದ್ರ ಮಾತನಾಡಿ, ಲಾಕ್‌ಡೌನ್‌ನಿಂದ ಕೂಲಿ ಇಲ್ಲದೆ ಗ್ರಾಮಸ್ಥರು ತೊಂದರೆಗೊಳಗಾಗಿದ್ದರು. ಹೀಗಾಗಿ ಗ್ರಾಮದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಲಾಗಿದೆ ಎಂದರು.

ವಿದ್ಯಾರ್ಥಿ ಸಂಘದ ಪೋಷಕ ವಾಸು, ಪ್ರಧಾನ ಕಾರ್ಯದರ್ಶಿ ಕಾರ್ತಿಕ್, ಪದಾಧಿಕಾರಿಗಳಾದ ಮಧು, ಸಿದ್ದು, ವೆಂಕಟೇಶ್, ಮಹದೇವಪ್ರಸಾದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net