

ಆನೇಕಲ್ : ಕರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಲಸಿಕೆ ಪ್ರಮುಖ ಅಸವಾಗಿದೆ. ಆದ್ದರಿಂದ, ಇದನ್ನು ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಲಸಿಕೆ ಕೊಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಬಿ. ರಾಮಲಿಂಗಾ ರೆಡ್ಡಿ ಆಗ್ರಹಿಸಿದರು.
ತಾಲೂಕಿನ ಸಿಂಗೇನ ಅಗ್ರಹಾರದಲ್ಲಿ ಭಾನುವಾರ ಬಡವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು. ಮನೆ ಬಾಗಿಲಲ್ಲೇ ಲಸಿಕೆ ಕೊಡುವುದನ್ನು ಅಭಿಯಾನದ ಮಾದರಿ ಮಾಡಬೇಕು. ಅದು ಬಿಟ್ಟು ಖಾಸಗಿ ಆಸ್ಪತ್ರೆಗಳಲ್ಲಿ ದುಡ್ಡು ಕೊಟ್ಟು ಚುಚ್ಚುಮದ್ದು ಪಡೆದುಕೊಳ್ಳಲು ಹೇಳುವುದು ಸರಿಯಲ್ಲ ಎಂದರು. ಕರೊನಾ ಪರೀಕ್ಷೆಯನ್ನು ಕಡಿಮೆ ಮಾಡಿರುವುದರಿಂದ ಸೋಂಕಿನ ಪ್ರಮಾಣ ಇಳಿಮುಖವಾಗಿದೆ. ಸರ್ಕಾರ ಹೇಳಿಕೊಂಡಿರುವಂತೆ ಲಾಕ್‌ಡೌನ್‌ನಿಂದ ಕಡಿಮೆ ಆಗಿಲ್ಲ ಎಂದು ಆರೋಪಿಸಿದರು.
ಸಮಸ್ಯೆ ಪರಿಹರಿಸಲು ಸರ್ಕಾರಗಳು ವಿಲ: ಲಾಕ್‌ಡೌನ್ ಮಾಡಿ ಎರಡು ತಿಂಗಳು ಆಗುತ್ತಿದೆ. ಆದರೂ ಕಟ್ಟಡ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರು, ಕೂಲಿ ಕಾರ್ಮಿಕರು, ಟ್ಯಾಕ್ಸಿ ಚಾಲಕರು ಹಾಗೂ ಬೀದಿಬದಿ ವ್ಯಾಪಾರಿಗಳಿಗೆ ೋಷಿಸಿರುವಂತೆ ಸಮರ್ಪಕವಾಗಿ ಧನಸಹಾಯ ನೀಡಲಾಗಿಲ್ಲ. ಆಹಾರ ಸಾಮಗ್ರಿಗಳು, ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದೆ. ಈ ಸಮಸ್ಯೆ ಪರಿಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಲವಾಗಿವೆ ಎಂದು ಬಿ. ರಾಮಲಿಂಗಾರೆಡ್ಡಿ ದೂರಿದರು.
ಶಾಸಕ ಬಿ.ಶಿವಣ್ಣ ಮಾತನಾಡಿ, ಲಾಕ್‌ಡೌನ್‌ದಿಂದ ಜನರಿಗೆ ತುಂಬಾ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ತಾಲೂಕಿನಾದ್ಯಂತ ಆಹಾರದ ಕಿಟ್‌ಗಳನ್ನು ವಿತರಿಸುತ್ತಿದ್ದಾರೆ ಎಂದರು. ಮುತ್ತಾನಲ್ಲೂರು ಗ್ರಾಪಂ ಸದಸ್ಯರಾದ ಸರಳಾ, ಶುಭಾ, ಕನ್ನಡ ಜಾಗೃತಿ ವೇದಿಕೆಯ ಅಧ್ಯಕ್ಷ ಮಂಜುನಾಥ್ ದೇವ, ಮುಖಂಡರಾದ ಹರೀಶ್, ಮಹಂತೇಶ್, ರೇವಣ್ಣ, ಆನಂದ್, ಮೋಹನ್ ಇದ್ದರು.
ರಾಜ್ಯ ಸರ್ಕಾರ ವಿದ್ಯಾರ್ಥಿಗಳ ವಿಚಾರದಲ್ಲಿ ಸರಿಯಾದ ಕ್ರಮ ಕೈಗೊಂಡಿಲ್ಲ. ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿರುವ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಚಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲು ಎಡವಿದೆ. ಸಮರ್ಪಕ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದ ಶಿಕ್ಷಣ ಸಚಿವರಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ?. ಬಿ. ರಾಮಲಿಂಗಾರೆಡ್ಡಿ ಶಾಸಕ