ಪಶು ಚಿಕಿತ್ಸಾ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ

08-JULY-GPT-4
ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ಗಣೇಶ್ ಪ್ರಸಾದ್ ನೂತನ ಪಶುಚಿಕಿತ್ಸಾ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಡಾ.ಮಾದೇಶ್, ಎಸ್.ಎಸ್.ಮಧುಶಂಕರ್, ಕೆ.ಎಸ್.ಮಹೇಶ್, ಬಿ.ಎಂ.ಮುನಿರಾಜು, ಶಿವಸ್ವಾಮಿ, ಎಚ್.ಎಸ್.ನಂಜುಂಡಪ್ರಸಾದ್, ಶಿವನಾಗಪ್ಪ ಇದ್ದರು.
Published on

ಗುಂಡ್ಲುಪೇಟೆ: ಸರ್ಕಾರ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಗ್ರಾಮಾಂತರ ಪ್ರದೇಶಗಳಲ್ಲಿ ಪಶುವೈದ್ಯಕೀಯ ಆಸ್ಪತ್ರೆಗಳನ್ನು ತೆರೆಯುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾಹಿತಿ ನೀಡಿದರು.

ತಾಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ಮಂಗಳವಾರ ಪಶುವೈದ್ಯ ಇಲಾಖೆಯ ಅನುದಾನ 40 ಲಕ್ಷ ರೂ. ವೆಚ್ಚದಲ್ಲಿ ನೂತನ ಪಶುಚಿಕಿತ್ಸಾ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಸರ್ಕಾರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲದಿದ್ದರೂ ವಿಪಕ್ಷಗಳು ಕೇವಲ ರಾಜಕಾರಣದಿಂದ ಟೀಕಿಸುತ್ತಿವೆ. ರೈತರ ಬೆನ್ನೆಲುಬು ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಸೋಮಹಳ್ಳಿ, ಹೊನ್ನೇಗೌಡನಹಳ್ಳಿ, ತೆರಕಣಾಂಬಿ ಹಾಗೂ ಮಲೆಯೂರು ಗ್ರಾಮಗಳಲ್ಲಿ ನೂತನ ಪಶುಚಿಕಿತ್ಸಾ ಕೇಂದ್ರ ನಿರ್ಮಾಣ ಮಾಡುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮಾದೇಶ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಸ್.ಮಧುಶಂಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಎಸ್.ಮಹೇಶ್, ಬಿ.ಎಂ.ಮುನಿರಾಜು, ಶಿವಸ್ವಾಮಿ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಎಪಿಎಂಸಿ ನಿರ್ದೇಶಕ ಶಿವನಾಗಪ್ಪ, ಮಾಜಿ ಛೇರ್ಮೆನ್ ಸದಾಶಿವಪ್ಪ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net