

ನಾಪೋಕ್ಲು: ಇಲ್ಲಿನ ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಗುರುವಾರ ಭೂಮಿ ಪೂಜೆ ನೆರವೇರಿಸಲಾಯಿತು.
15 ಲಕ್ಷ ರೂ.ಅನುದಾನದಲ್ಲಿ ನಿರ್ಮಿಸಲಾಗುವ ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಕಟ್ಟಡ ಭೂಮಿಪೂಜೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಮತ್ತು ಸದಸ್ಯರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಶಶಿ ಮಂದಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಕೆ.ಎ.ಇಸ್ಮಾಯಿಲ್, ಗ್ರಾಮ ಪಂಚಾಯಿತಿ ಸದಸ್ಯ ಕುಶು ಕುಶಾಲಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಅರುಣ್ ಬೇಬ, ಹೇಮಾ ಅರುಣ್, ಕೆ.ವೈ.ಅಶ್ರಫ್, ಪಶುಪಾಲನೆ ಇಲಾಖೆಯ ಉಪನಿರ್ದೇಶಕ ಡಾ.ಲಿಂಗರಾಜ್ ದೊಡ್ಡಮನಿ, ಸಹಾಯಕ ನಿರ್ದೇಶಕ ಡಾ.ಕೆ.ಎ. ಪ್ರಸನ್ನ, ಪಶುವೈದ್ಯಾಧಿಕಾರಿ ಡಾ.ಶಿಲ್ಪಾಶ್ರೀ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.