ಶೇಂಗಾ-ಕುಸುಬೆ ಉತ್ಪನ್ನ ಖರೀದಿ ಆರಂಭ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿ ಎಫ್​ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್​ಗೆ 6,377 ರೂ. ರಂತೆ ಹಾಗೂ ಕುಸುಬೆ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್​ಗೆ 5,800 ರೂ. ದಂತೆ ಖರೀದಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಬಲ ಬೆಲೆ ಯೋಜನೆ ಅಡಿ ಎಫ್​ಎಕ್ಯೂ ಗುಣಮಟ್ಟದ ಶೇಂಗಾ ಹಾಗೂ ಕುಸುಬೆ ಉತ್ಪನ್ನಗಳ ಮಾರಾಟಕ್ಕಾಗಿ ರೈತರಿಗೆ ನೋಂದಣಿ ಮಾಡಿಕೊಳ್ಳಲು ಜು. 1ರಿಂದ ಆ. 14ರವರೆಗೆ ಮತ್ತು ನೋಂದಾಯಿತ ರೈತರಿಂದ ಮಾತ್ರ ಸೆ. 28ರವರೆಗೆ ಖರೀದಿಸಲಾಗುತ್ತದೆ. ಶೇಂಗಾ ಹಾಗೂ ಕುಸುಬೆ ಉತ್ಪನ್ನಗಳನ್ನು ಖರೀದಿಸಲು ಸರ್ಕಾರದಿಂದ ಕುಂದಗೋಳ, ಹುಬ್ಬಳ್ಳಿ, ನವಲಗುಂದ ತಾಲೂಕುಗಳ 7 ಸ್ಥಳಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಉತ್ಪನ್ನಗಳನ್ನು ಮಾರಾಟ ಮಾಡಲು ರೈತರು ನೋಂದಣಿಗೆ ಆಧಾರ ಗುರುತಿನ ಚೀಟಿಯ ಮೂಲ ಪ್ರತಿ ಹಾಗೂ ಅದರ ನಕಲು ಪ್ರತಿ, ಪಹಣಿ ಪತ್ರಿಕೆಯಲ್ಲಿರುವ ಹೆಸರಿನ ರೈತರ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್​ ಖಾತೆ ಪಾಸ್​ ಪುಸ್ತಕದ ನಕಲು ಪ್ರತಿಯನ್ನು ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net