

ವಿಜಯವಾಣಿ ಸುದ್ದಿಜಾಲ ಕಮಲಾಪುರ
ತಾಲೂಕಿನ ಹರಕಂಚಿ ಗ್ರಾಮದಲ್ಲಿ ಗುರುವಾರ ಮಧ್ಯ ರಾತ್ರಿ ಎರಡು ಕೋಮಿನ ಗುಂಪುಗಳ ನಡುವೆ ಪರಸ್ಪರ ವಾಗ್ವಾದ ಆರಂಭವಾಗಿ ಹಲ್ಲೆಯಾಗಿದ್ದು
ಜಗದೇವಪ್ಪ ಕೋಟನೂರ (52) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಕಲಬುರಗಿ ಎಸ್ಪಿ ಶ್ರೀನಿವಾಸಲು, ಡಿವೈಎಸ್ಪಿ ಉಮೇಶ ಚಿಕ್ಕಮಠ, ಸಿಪಿಐ ವ್ಹಿ ನಾರಾಯಣ, ಮಹಾಗಾಂವ ಪಿಎಸ್ ಐ ಆಶಾ ರಾಠೋಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಮುಂಜಾಗ್ರತಾ ಕ್ರಮವಾಗಿ ಪೋಲಿಸ್ ಭದ್ರತೆ ಒದಗಿಸಲಾಗಿದೆ.
ಈ ಕುರಿತು ಮಹಾಗಾಂವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.