ವಿದ್ಯಾರ್ಥಿಗಳಿಗೆ ಸಮೂಹ ಗಾಯನ ಸ್ಪರ್ಧೆ

Published on

ಹುಬ್ಬಳ್ಳಿ: ಇಲ್ಲಿಯ ಎಸ್ ಜೆಎಂವಿ ಕಲಾ ಹಾಗೂ ವಾಣಿಜ್ಯ ಮಹಿಳಾ ವಿದ್ಯಾಲಯ ಕನ್ನಡ ವಿಭಾಗ ಮತ್ತು ನಗರ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಡಾ. ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆಗಳ ಆಶ್ರಯದಲ್ಲಿ ಧಾರವಾಡ ಜಿಲ್ಲಾ ಪದವಿ ಮಹಾ ವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯೋತ್ಸವ ಸವಿನೆನಪಿಗಾಗಿ ಕನ್ನಡ ನಾಡು ನುಡಿ ಗೀತೆಗಳ ಸಮೂಹ ಗಾಯನ ಸ್ಪರ್ಧೆಯನ್ನು ಅ. 26ರಂದು ಬೆಳಗ್ಗೆ 10.30ಕ್ಕೆ ಮಹಿಳಾ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.

ಒಂದು ಮಹಾವಿದ್ಯಾಲಯದಿಂದ 5 ವಿದ್ಯಾಥಿರ್ಗಳ ತಂಡ ಸ್ಪರ್ಧೆಯಲ್ಲಿ ಭಾಗವಹಿಸಬಹುದು. 5 ನಿಮಿಷದಲ್ಲಿ ವಾದ್ಯ ಬಳಸದೇ ಗೀತೆ ಪ್ರಸ್ತುತಪಡಿಸಬೇಕು. ವಿಜೇತರಿಗೆ ನಗದು ಹಾಗೂ ಪ್ರಮಾಣ ಪತ್ರ ವಿತರಿಸಲಾಗುವುದು. ಅ. 24ರೊಳಗಾಗಿ ಹೆಸರು ನೋಂದಾಯಿಸಲು ಕೋರಲಾಗಿದೆ.

ಮಾಹಿತಿಗೆ ಮಹಿಳಾ ಮಹಾವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸುಪ್ರಿಯಾ ಮಲಶೆಟ್ಟಿ ಅಥವಾ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಡಾ. ಬಿ.ಎಸ್. ಮಾಳವಾಡ ಅವರನ್ನು ಸಂಪಕಿರ್ಸಬಹುದು ಎಂದು ನಗರ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ವಿದ್ಯಾ ವಂಟಮುರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net