ಪರಿಹಾರಕ್ಕೆ ಬೆಳೆಗಾರರ ಮನವಿ

P PURA SHENGAA 01 (2)
Published on

ಚಳ್ಳಕೆರೆ: ಮಳೆ ಇಲ್ಲದೆ ಶೇಂಗಾ ಬೆಳೆ ಸಂಪೂರ್ಣ ಒಣಗುವ ಹಂತದಲ್ಲಿದ್ದು, ಸಾಲ ಸೋಲ ಮಾಡಿ ಬಿತ್ತನೆ ಮಾಡಿದ್ದ ರೈತರಿಗೆ ನುಂಗಲಾರದ ತುತ್ತಾಗಿದೆ.

ಕೂಡಲೇ ಬೆಳೆವಿಮೆ, ಬೆಳೆನಷ್ಟ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ತಾಲೂಕಿನ ರೈತರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಗುರುವಾರ ರಾತ್ರಿ ತಾಲೂಕಿನ ಕೆಲ ಭಾಗದಲ್ಲಿ ಮಳೆಯಾಗಿದೆ. ಆದರೂ, ಶೇಂಗಾ ಬೆಳೆಗೆ ಯಾವುದೇ ಪ್ರಯೋಜನವಿಲ್ಲ. ಕಳೆದ ವರ್ಷ ಅತಿಯಾದ ಮಳೆಯಿಂದ ಬೆಳೆ ನಷ್ಟ ಅನುಭವಿಸಿದ ರೈತರು, ಈ ವರ್ಷ ಸಕಾಲಕ್ಕೆ ಮಳೆ ಇಲ್ಲದೆ ವಾರ್ಷಿಕ ಶೇಂಗಾ ಬೆಳೆ ಸಂಪೂರ್ಣ ನಷ್ಟವಾಗಿದೆ.

ಶಾಸಕರು, ಸಂಬಂಧಿಸಿದ ಅಧಿಕಾರಿಗಳು ನಮ್ಮ ಸಮಸ್ಯೆಗೆ ಸ್ಪಂದಿಸಬೇಕು ಎಂದು ರೈತ ರಾಜು ಬೂದಿಹಳ್ಳಿ, ಸಿ.ಜಿ. ತಿಪ್ಪೇಸ್ವಾಮಿ, ಜಿ. ಸಣ್ಣೀರಣ್ಣಯ್ಯ, ಕೆ. ಚಿಕ್ಕಣ್ಣ, ಜೆಜೆಗುಂಟೆ ಹನುಮಂತರಾಯ, ಪ್ರಕಾಶ ಚೌಳೂರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net