ಸೇವಾ ಬದ್ಧತೆಯಿಂದ ಸಹಕಾರಿ ಸಂಘಗಳ ಬೆಳವಣಿಗೆ

sid
Published on

ವಿಜಯವಾಣಿ ಸುದ್ದಿಜಾಲ ಹಾಲಾಡಿ

ಸಹಕಾರಿ ಸಂಗಳ ಬೆಳವಣಿಗೆಯಲ್ಲಿ ಸೇವಾ ಬದ್ಧ್ದತೆ ಪ್ರಮುಖ ಪಾತ್ರ ವಹಿಸುತ್ತದೆ. ಸಹಕಾರಿ ಸಂಗಳು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ ಕಲ್ಪಿಸುವ ಮೂಲಕ ಸ್ಪಂದಿಸಬೇಕು ಎಂದು ವಿಧಾನ ಪರಿಷತ್ ವಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಹೇಳಿದರು.

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂದ ವತಿಯಿಂದ 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಹಾಲಾಡಿ ಶಾಖೆಯ ಹವಾನಿಯಂತ್ರಿತ ನವೀಕೃತ ಕಟ್ಟಡ ‘ರೈತಮಿತ್ರ’ ಬುಧವಾರ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಭದ್ರತಾಕೋಶ ಉದ್ಘಾಟಿಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ.ಮಹೇಶ್ ಹೆಗ್ಡೆ ಮೊಳಹಳ್ಳಿ ನೂತನ ನವೋದಯ ಸ್ವಸಹಾಯ ಸಂಗಳನ್ನು ಉದ್ಘಾಟಿಸಿದರು. ಕುಂದಾಪುರ ವಿಭಾಗದ ಸಹಕಾರ ಸಂಗಳ ಸಹಾಯಕ ನಿಬಂಧಕಿ ಸುಕನ್ಯಾ ಗ್ರಾಹಕರಿಗೆ ಲಾಕರ್ ಕೀ ಹಸ್ತಾಂತರಿಸಿದರು.

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಅಧ್ಯಕ್ಷತೆ ವಹಿಸಿದ್ದರು. ಹಾಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕಕುವಾರ್ ಶೆಟ್ಟಿ ಚೋರಾಡಿ, ಪ್ರಮುಖರಾದ ಎಚ್.ಕೆ.ಸೀತಾರಾಮ ಶೆಟ್ಟಿ, ದಯಾನಂದ ಆರ್.ಶೆಟ್ಟಿ, ಚಂದ್ರಶೇಖರ ಶೆಟ್ಟಿ, ದಯಾನಂದ ಪೂಜಾರಿ ಕೆ., ಇಚ್ಚಿತಾರ್ಥ ಶೆಟ್ಟಿ, ಉದಯ ಶೆಟ್ಟಿ, ಕಷ್ಣ ನಾಯ್ಕ, ಸವಿತಾ ಪಿ.ಶೆಟ್ಟಿ, ಸುಜಾತಾ ಪೂಜಾರಿ, ಶಿವರಾಮ, ಪ್ರದೀಪ, ಚಂದ್ರಶೇಖರ ಶೆಟ್ಟಿ, ಚಂದ್ರಶೇಖರ ಪೂಜಾರಿ ಉಪಸ್ಥಿತರಿದ್ದರು.

ಸಿಇಒ ಕೀರ್ತಿಕುವಾರ್ ಶೆಟ್ಟಿ ಸ್ವಾಗತಿಸಿದರು. ಡಾ.ಗಣೇಶ್, ವಿಜಯಲಕ್ಷ್ಮೀ ರೈತಗೀತೆ ಹಾಡಿದರು. ಬಿ.ಹರೀಶ್ ಕಿಣಿ ಬೆಳ್ವೆ ವಂದಿಸಿದರು. ಸುಬ್ರಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ, ಗೌರವಾರ್ಪಣೆ

ಸಂಘದ ವತಿಯಿಂದ ಸುಯ್ಯಾನ್ ಸಾಹೇಬ್, ಸುಬ್ರಾಯ ಪ್ರಭು, ಸತೀಶ್ ನಾಯಕ್, ಬಾಲಚಂದ್ರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸೂರ್ಯಪ್ರಕಾಶ ದಾಮ್ಲೆ ಸಬ್ಬಾಗಿಲು, ನರಸಿಂಹ ಶೆಟ್ಟಿ ಚೋರಾಡಿ, ಅಣ್ಣಪ್ಪ ಕುಲಾಲ ಸಹಿತ ಹಲವರನ್ನು ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net