ಗೃಹಲಕ್ಷ್ಮಿ ವಿಶ್ವದ ಅತೀದೊಡ್ಡ ಯೋಜನೆ,ಶಾಸಕ ಪ್ರಸಾದ ಅಬ್ಬಯ ಅಭಿಪ್ರಾಯ

IMG_20230830_210855_975-2.jpg
Published on

ಹುಬ್ಬಳ್ಳಿ: ಗೃಹಲಕ್ಷ್ಮಿ ಯೋಜನೆಯಡಿ 1.10ಕೋಟಿ ಲಾನುಭವಿಗಳ ಬ್ಯಾಂಕ್ ಖಾತೆಗೆ 2 ಸಾವಿರ ರೂ. ಜಮಾ ಮಾಡುವ ಮೂಲಕ ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದೆ, ಬಡವರು, ಮಹಿಳೆಯರು ಹಾಗೂ ದೀನದಲಿತರ ಏಳಿಗೆ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂಬುದು ಸಾಬೀತಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಇಲ್ಲಿಯ ಮಹಾನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ 61 ಮತ್ತು 63ರಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ಮಹಿಳೆಯರಿಗೆ ನಿತ್ಯ ಎದುರಾಗುವ ಬೆಲೆ ಏರಿಕೆಯ ಸಂಕಷ್ಟಗಳನ್ನು ತಗ್ಗಿಸಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ಉದ್ದೇಶದಿಂದ ಈ ಯೋಜನೆ ಜಾರಿ ಮಾಡಲಾಗಿದೆ. ಪ್ರಸಕ್ತ ವರ್ಷ ಇದಕ್ಕಾಗಿ 17,500 ಕೋಟಿ ರೂ. ಮೀಸಲಿಡಲಾಗಿದೆ. ವಿಶ್ವದಲ್ಲಿಯೇ ಇದು ಅತಿ ದೊಡ್ಡ ಯೋಜನೆ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳಲ್ಲಿ ನಾಲ್ಕು ಜಾರಿಗೆ ತಂದಿದ್ದು, ಇನ್ನೊಂದು ಗ್ಯಾರಂಟಿಯನ್ನು ಶ್ರೀ ಜಾರಿಗೊಳಿಸಲಾಗುವುದು. ಇದರೊಂದಿಗೆ ಪ್ರಣಾಳಿಕೆಯಲ್ಲಿ ನೀಡಿದ ಪ್ರತಿ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಶಾಸಕರು ಹೇಳಿದರು.

ಹುಬ್ಬಳ್ಳಿ- ಧಾರವಾಡದಲ್ಲಿ ಶಾಂತಿ ಸುವ್ಯವಸ್ಥೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರನ್ ಅವರಿಗೆ ಹೇಳಲಾಗಿದೆ. ಗೂಂಡಾಗಿರಿ, ಡ್ರಗ್ಸ್, ಗಾಂಜಾ, ಜೂಜು ಸೇರಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡದಂತೆ ಸೂಚಿಸಲಾಗಿದೆ ಎಂದು ಶಾಸಕ ಅಬ್ಬಯ್ಯ ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಪಾಲಿಕೆ ವಿರೋಧ ಪದ ಮಾಜಿ ನಾಯಕ ದೊರೆರಾಜ ಮಣಿಕುಂಟ್ಲ, ಪಾಲಿಕೆ ಸದಸ್ಯರಾದ ಇಲಿಯಾಸ್ ಮನಿಯಾರ್, ಪಾಲಿಕೆ ಮಾಜಿ ಸದಸ್ಯೆ ಸುಧಾ ಮಣಿಕುಂಟ್ಲ, ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು, ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net