ಗೃಹಲಕ್ಷ್ಮೀ ನೋಂದಣಿ ಮಾಹಿತಿಗೆ 1902ಗೆ ಕರೆ ಮಾಡಿ

web 3
Published on

ಧಾರವಾಡ: ಗೃಹಲಕ್ಷ್ಮೀ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ 2,000 ರೂ. ಹಣ ಜಮೆ ಮಾಡಲಾಗುತ್ತದೆ. ಪ್ರತಿ ಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಗೆ ಕರೆ   ಅಥವಾ 8147500500 ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದು. ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಕೇಂದ್ರಗಳು ಅರ್ಜಿ ಸಲ್ಲಿಸುವ ಕೇಂದ್ರಗಳಾಗಿರುತ್ತವೆ. ನೋಂದಣಿ ಉಚಿತವಾಗಿದ್ದು, ಅರ್ಜಿ ಸಲ್ಲಿಕೆಗೆ ಶುಲ್ಕ ಪಾವತಿ ಮಾಡಬಾರದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net