

ತುಮಕೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಲ ಜೀವನ್ ಮಿಷನ್ ಯೋಜನೆ ಜಿಲ್ಲೆಯಲ್ಲಿ ಸಂಪೂರ್ಣ ಅನುಷ್ಠಾನಕ್ಕೆ ಕ್ರಿಯಾ ಯೋಜನೆ ತಯಾರಿಸಿ ಕೂಡಲೇ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನ ಕುರಿತು ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲೆಯ ಎಲ್ಲ ಗ್ರಾಮವಾರು ಕ್ರಿಯಾ ಯೋಜನೆ ರೂಪಿಸಬೇಕು ಎಂದರು.
ಜಿಲ್ಲೆಯಲ್ಲಿ 82 ಹಳ್ಳಿಗಳ 11671 ಮನೆಗಳಿಗೆ ಕಾರ್ಯಾತ್ಮಕ ನಳ(ನಲ್ಲಿ) ಅಳವಡಿಸುವ ಕಾಮಗಾರಿ ಕಾಲಮಿತಿಯೊಳಗೆ ಮುಗಿಸಿ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು. ಜಿಲ್ಲೆಯ ಹತ್ತು ತಾಲೂಕಿನಲ್ಲೂ ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನಗೊಳಿಸಬೇಕು. ನೀರಿನ ಮೂಲವಿರುವ ಸ್ಥಳದಲ್ಲಿ ಆದ್ಯತೆ ಮೇರೆಗೆ ಯೋಜನೆ ಸಮರ್ಪಕವಾಗಿ ಅನುಷ್ಟಾನವಾಗಬೇಕು ಎಂದರು.
ಪ್ರಗತಿ ಪರಿಶೀಲನಾ ಸಭೆಗೆ ಪೂರ್ಣ ವಾಹಿತಿ ಮತ್ತು ಸೂಕ್ತ ಯೋಜನಾ ತಯಾರಿ ಬಗ್ಗೆ ವಾಹಿತಿ ಒದಗಿಸದ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸಿದ ಸಂಸದರು, ಕೆಲವು ಅಧಿಕಾರಿಗಳ ಸೋಮಾರಿ ತನದಿಂದ ಜಿಲ್ಲೆಯಲ್ಲಿ ಯೋಜನೆ ವಿಫಲವಾಗಬಾರದು. ಆದ್ದರಿಂದ ಸೂಕ್ತ ಯೋಜನಾ ತಯಾರಿ ಮತ್ತು ಸಮರ್ಪಕ ವಾಹಿತಿ ಸಿದ್ಧಪಡಿಸಿ ಎಂದರು.
ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಇಇ ವಾತನಾಡಿದರು. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಮೇಶ್, ಪಾಲಿಕೆ ಆಯುಕ್ತೆ ರೇಣುಕಾ ಮತ್ತಿತರರು ಇದ್ದರು.
ಯೋಜನೆಯ ರೂಪುರೇಷೆ ತಯಾರಿಸಿ: ಪ್ರಸಕ್ತ ಸಾಲಿನಲ್ಲಿ ಅನುಮೋದನೆಯಾಗಿ ಕಾರ್ಯಾತ್ಮಕ ನಳ ಸಂಪರ್ಕದ ಕಾರ್ಯ ಅನುಷ್ಠಾನಗೊಳ್ಳಲಿರುವ ಗ್ರಾಮಗಳನ್ನು ಹೊರತು ಪಡಿಸಿ ಜಿಲ್ಲೆಯ ಉಳಿದ ಗ್ರಾಮಗಳಲ್ಲಿಯೂ ಈ ಯೋಜನೆಯ ಅನುಷ್ಠಾನಕ್ಕೆ ಈಗಿನಿಂದಲೇ ನೀರಿನ ಮೂಲದ ಆಧಾರದ ಮೇಲೆ ಆದ್ಯತೆಯ ಮೇರೆಗೆ ಯೋಜನೆಯ ರೂಪುರೇಷೆ ತಯಾರಿಸಬೇಕು ಎಂದು ಜಿಪಂ ಸಿಇಒ ಡಾ.ಕೆ.ವಿದ್ಯಾಕುವಾರಿ ಸಲಹೆ ನೀಡಿದರು.
ಕೆರೆಗಳಲ್ಲಿ ಶೇಖರಣೆಯಾಗುವ ನೀರಿನ ಮೂಲ ಹಾಗೂ ಶೇಖರಣೆಯಾಗಿರುವ ಕೆರೆಗಳಿಂದ ಎಷ್ಟು ಗ್ರಾಮಗಳಿಗೆ ಜಲ ಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬಹುದು ಎಂಬ ಬಗ್ಗೆ ಸಂಪೂರ್ಣ ವಾಹಿತಿಯುಳ್ಳ ಕ್ರಿಯಾ ಯೋಜನೆ ತಯಾರಿಸಬೇಕು. ಇದಕ್ಕೆ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಇನ್ನೊಂದು ತಿಂಗಳೊಳಗಾಗಿ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯನ್ನು ಯಶಸ್ವಿಯಾಗಿ ಅನುಫ್ಟಿಾನಗೊಳಿಸಲು ಸಮನ್ವಯದಿಂದ ಕೆಲಸ ವಾಡಲಾಗುವುದು. ಪ್ರಸಕ್ತ ಸಾಲಿಗೆ ಅನುಮೋದನೆಯಾಗಿರುವ ಕಾರ್ಯಾತ್ಮಕ ನಳ ಅಳವಡಿಕೆ ಕಾರ್ಯವನ್ನೂ ಕಾಲಮಿತಿಯೊಳಗೆ ಅನುಷ್ಟಾನಕ್ಕೆ ತರಲಾಗುವುದು ಎಂದು ಸಂಸದರಿಗೆ ವಾಹಿತಿ ನೀಡಿದರು.