ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಕಾಲೇಜು ತಂಡ ಪ್ರಥಮ

sports day
Published on

ಮೈಸೂರು: ಉತ್ತಮ ಪ್ರದರ್ಶನ ನೀಡಿದ ಮೈಸೂರಿನ ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಕಾಲೇಜು ತಂಡ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮೈಸೂರು ವಿಭಾಗ ಮಟ್ಟದ ಮಹಿಳಾ ವಿಭಾಗದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು.

ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಕಾಲೇಜು ಆವರಣದಲ್ಲಿ ಗುರುವಾರ ಫೈನಲ್ ಪಂದ್ಯದಲ್ಲಿ ಮಂಡ್ಯದ ಪಿಇಎಸ್‌ಸಿಇ ಕಾಲೇಜು ವಿರುದ್ಧ 2-1 ಸೆಟ್‌ಗಳಿಂದ ಜಯ ಸಾಧಿಸಿತು.

ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಎಸ್‌ಎಸ್‌ಎಸ್ ಇಂಜಿನಿಯರಿಂಗ್ ಕಾಲೇಜು ತಂಡ 2-0 ಸೆಟ್‌ಗಳಿಂದ ಎಟಿಎಂಇ ವಿರುದ್ಧ ಹಾಗೂ ಪಿಇಎಸ್‌ಸಿಇ ತಂಡ 2-0 ಸೆಟ್‌ಗಳಿಂದ ವಿದ್ಯಾವರ್ಧಕ ವಿರುದ್ಧ ಗೆಲುವು ದಾಖಲಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net