

ಮಂಡ್ಯ: ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಫೆ.21ರಂದು ಬೆಳಗ್ಗೆ 10.30ಕ್ಕೆ ಜಿ.ಎಸ್.ಟಿ ಕಾರ್ಯಾಗಾರ ಮತ್ತು ಜಿ.ಎಸ್.ಟಿ ಅಮ್ನೆಸ್ಟಿ ಯೋಜನೆ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಮಂಡಳಿ, ವಾಣಿಜ್ಯ ತೆರಿಗೆ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಸಮಾರಂಭವನ್ನು ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಪರಮೇಶ್ವರಗೌಡ ಪಾಟೀಲ್ ಉದ್ಘಾಟಿಸಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಮಂಡಳಿ ಅಧ್ಯಕ್ಷ ಕೆ.ಪ್ರಭಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನಾಗೇಂದ್ರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.