ಮೈಸೂರು-ಕೊಡಗಿಗೆ ಜಿಟಿಡಿ, ಮಂಡ್ಯಕ್ಕೆ ಸಾ.ರಾ. ಉಸ್ತುವಾರಿ

GT Devegouda
Published on

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಉಸ್ತುವಾರಿಯಾಗಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರನ್ನು ನೇಮಕ ಮಾಡಲಾಗಿದೆ.

ಸಹ ಉಸ್ತುವಾರಿ ಹೊಣೆಗಾರಿಕೆಯನ್ನು ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ಶಾಸಕ ಎ.ಮಂಜು, ತಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಅಶ್ವಿನ್‌ಕುಮಾರ್ ಅವರಿಗೆ ವಹಿಸಲಾಗಿದೆ.


ಮಂಡ್ಯ ಕ್ಷೇತ್ರದ ಉಸ್ತುವಾರಿ ಆಗಿ ಜಿಲ್ಲೆಯ ಕೆ.ಆರ್.ನಗರ ಕ್ಷೇತ್ರದ ಮಾಜಿ ಶಾಸಕ ಸಾ.ರಾ.ಮಹೇಶ್ ಅವರನ್ನು ನೇಮಿಸಲಾಗಿದೆ. ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ಗೌಡ ಸಹ ಉಸ್ತುವಾರಿಯಾಗಿದ್ದಾರೆ.


ಲೋಕಸಭೆ ಚುನಾವಣೆಯ ರಾಜ್ಯದ ಎಲ್ಲ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನಾಯಕರನ್ನು ನೇಮಕ ಮಾಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net