ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆ

gyarenty sabhe
Published on

ಕುಶಾಲನಗರ: ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಸಭಾಂಗಣದಲ್ಲಿ ಗುರುವಾರ ನಡೆಯಿತು.

ಗೃಹ ಜ್ಯೋತಿ ಯೋಜನೆ ವಿಷಯಗಳ ಪ್ರಸ್ತಾವನೆಯ ಸಂದರ್ಭದಲ್ಲಿ ಹೆಬ್ಬಾಲೆಯಲ್ಲಿ ನೂತನ ಚೆಸ್ಕಂ ವಿದ್ಯುತ್ ಶಾಖಾ ಕಛೇರಿಯನ್ನು ತೆರಯುವ ಮೂಲಕ ಗ್ರಾಮಾಂತರ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧವಾಗಿ ನೂತನ ಕಛೇರಿಯನ್ನು ತೆರೆಯಲು ಸಂಬಂಧಿಸಿದ ಇಲಾಖೆಯ ವ್ಯವಸ್ಥಾಪಕರಿಗೆ ಪತ್ರವ್ಯವಹಾರ ಮಾಡುವ ಬಗ್ಗೆ ಸಭೆಯಲ್ಲಿ ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ ವಿ.ಪಿ.ಶಶಿಧರ್ ಮಾತಾನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಯುವ ನಿಧಿ ಯೋಜನೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಹಾಜರಿದ್ದ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪೂರಕವಾದ ಮಾಹಿತಿ ಸಂಗ್ರಹಿಸಿ, ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಹೆಚ್ಚುವರಿ ಸಾರಿಗೆ ಸಂಪರ್ಕದ ವ್ಯವಸ್ಥೆ ಮತ್ತು ಯೋಜನೆಯಲ್ಲಿ ಪಲಾನುಭವಿಗಳು ಹೆಚ್ಚಾಗಿರುವ ಬಗ್ಗೆ ಇನ್ನೂ ಬಾಕಿ ಇರುವ ಫಲಾನುಭವಿಗಳ ಸಂಖ್ಯೆಗಳ ಬಗ್ಗೆ ಹಾಜರಿದ್ದ ಅಧಿಕಾರಿಗಳೊಂದಿಗೆ ಸವಿಸ್ತಾರವಾದ ಚರ್ಚೆಗಳು ನಡೆದವು. ಸಭೆಯಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಇಒ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ.ಭೀಮಯ್ಯ, ತಾಲೂಕು ಸಮಿತಿ ಸದಸ್ಯರಾದ ಕೆ.ಎಸ್.ಕೃಷ್ಣ ಗೌಡ, ಶ್ರೀನಿವಾಸನ್, ಅಬ್ದುಲ್ ರಜಾಕ್, ರಫೀಕ್ ಖಾನ್, ಆದಂ, ಮಲ್ಲಿಕಾರ್ಜುನ, ಶ್ರೀನಿವಾಸ್, ಮುಸ್ತಫಾ, ಸೇರಿದಂತೆ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀದೇವಿ, ವಿದ್ಯುತ್ ಇಲಾಖೆಯ ಇಂಜಿನಿಯರ್ ರಾಣಿ, ಸಾರಿಗೆ ಇಲಾಖೆ ಅಧಿಕಾರಿ ನಾಗಮಲ್ಲೇಶ್, ಅಶೋಕ್ ಮತ್ತು ಉದ್ಯೋಗ ವಿನಿಮಯ ಇಲಾಖೆ ಅಧಿಕಾರಿ ಮಂಜುನಾಥ್ ಸೇರಿದಂತೆ ವಿವಿಆ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net