ರೈತರ ಸಾಲ ಮನ್ನಾಕ್ಕಿಂತ ‘ಗ್ಯಾರಂಟಿ’ ಉತ್ತಮ : ಸಚಿವ ಚಲುವರಾಯಸ್ವಾಮಿ

chaluvarayaswamy
Published on

ಮೈಸೂರು: ರೈತರಿಗೆ ಕಳೆದ ಎರಡು ವರ್ಷಗಳಿಂದ ಯಾವುದೇ ಸಮಸ್ಯೆಗಳು ಎದುರಾಗಿಲ್ಲ. ಕೆಲವರು ಸಾಲ ಮನ್ನಾಕ್ಕಾಗಿ ಮನವಿ ಮಾಡುತ್ತಿದ್ದಾರೆ. ಹಿಂದಿನ ಸರ್ಕಾರಗಳು ರೈತರ ಸಾಲ ಮನ್ನಾ ಮಾಡಿ ಸರ್ಕಾರದ ಬೊಕ್ಕಸದಿಂದ 5 ರಿಂದ 12 ಸಾವಿರ ಕೋಟಿ ರೂ. ಖರ್ಚಾಗಿದೆ. ಇದರಿಂದ ಕೆಲವೇ ಕುಟುಂಬಗಳಿಗೆ ಅನುಕೂಲವಾಗಲಿದ್ದು, ಅದಕ್ಕೂ ಮಿಗಿಲಾಗಿ ಒಟ್ಟು ರಾಜ್ಯದ ರೈತರಿಗೆ, ಬಡವರಿಗಾಗಿ 5 ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ ಎಂದು ಕೃಷಿ ಸಚಿವ ಕೃಷಿ ಸಚಿವ ಎನ್.ಚವರಾಯಸ್ವಾಮಿ ಹೇಳಿದರು.

ರೈತ ದಸರಾ ಉಪ ಸಮಿತಿ ವತಿಯಿಂದ ನಗರದ ಜೆ.ಕೆ.ಮೈದಾನದ ಎಂಎಂಸಿ ಅಮೃತ ಮಹೋತ್ಸವ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ರೈತ ದಸರಾ ಕಾರ್ಯಕ್ರಮವನ್ನು ಭತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ರೈತರಿಗೆ ಅವಶ್ಯಕವಿರುವ ಸೌಲಭ್ಯ ಮತ್ತು ಮಾರ್ಗದರ್ಶನಗಳನ್ನು ಸರ್ಕಾರದಿಂದ ಒದಗಿಸಲಾಗುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಇದುವರೆಗೆ 90 ಸಾವಿರ ಕೋಟಿ ರೂ. ಹಣ ವಿನಿಯೋಗಿಸಲಾಗಿದೆ. 5 ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ಖರ್ಚಾಗಲಿದ್ದು, ಇದಕ್ಕಿಂತ ಒಳ್ಳೆಯ ಯೋಜನೆ ಬೇಕೆ? ಸಾಲ ಮನ್ನಾಕ್ಕಿಂತ ಹೆಚ್ಚಿನ ಅನುಕೂಲ ದೊರೆತ್ತಿಲ್ಲವೇ ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net