ಗ್ಯಾರಂಟಿ ಯೋಜನೆಗಳಿಗೆ ಮತದಾರ ಮಣೆ

23 MASKI 01
ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಮಸ್ಕಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಡಿಸಿ ವಿಜಯೋತ್ಸವ ಆಚರಿಸಿದರು. ಶಾಸಕ ಆರ್ ಬಸನಗೌಡ ತುರ್ವಿಹಾಳ, ಬಸನಗೌಡ ಪೊಲೀಸ್ ಪಾಟೀಲ್, ಪ್ರಧಾನ ಕಾರ್ಯದರ್ಶಿ ಕೃಷ್ಣ ಡಿ.ಚಿಗರಿ, ಅದಾನಗೌಡ, ಮಲ್ಲಯ್ಯ ಬಳ್ಳಾ, ಹನುಮಂತಪ್ಪ ವೆಂಕಟಾಪುರ, ಮಲ್ಲನಗೌಡ ಸುಂಕನೂರ, ವೀರೇಶ ಪಾಟೀಲ್ ಇತರರಿದ್ದರು.
Published on

ಮಸ್ಕಿ: ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ಶಾಸಕ ಆರ್ ಬಸನಗೌಡ ತುರ್ವಿಹಾಳ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಆದ್ದರಿಂದ ಜನರು ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಬಿಜೆಪಿ ಪಕ್ಷದವರು ಏನೇ ಅಪಪ್ರಚಾರ ಮಾಡಿದರು ಜನ ಅವರನ್ನು ನಂಬುವುದಿಲ್ಲ ಎಂದರು. ರಾಜ್ಯದಲ್ಲಿ ಐದು ಗ್ಯಾರಂಟಿಗಳು ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿರುವುದರಿಂದ ಜನರು ನಮ್ಮ ಮೇಲೆ ಇನ್ನಷ್ಟು ನಂಬಿಕೆಯನ್ನು ಇಟ್ಟಿದ್ದಾರೆ ಆದ್ದರಿಂದ ಮೂರು ಕ್ಷೇತ್ರಗಳಲ್ಲಿ ಅಭೂತಪೂರ್ವ ಜಯವನ್ನು ತಂದುಕೊಟ್ಟಿದ್ದಾರೆ ಎಂದರು.

ಪ್ರಮುಖರಾದ ಹನುಮಂತಪ್ಪ ವೆಂಕಟಾಪುರ, ಮಲ್ಲನಗೌಡ ಸುಂಕನೂರ, ವೀರೇಶ ಪಾಟೀಲ್, ಬಿ.ಜಿ. ನಾಯಕ, ಕರಿಯಪ್ಪ ಹಾಲಾಪುರು, ಆನಂದ ವೀರಾಪುರ, ನಾಗಭೂಷಣ, ಸುರೇಶ ಬ್ಯಾಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net