ಬಡವರ ಅನುಕೂಲಕ್ಕಾಗಿ ಗ್ಯಾರಂಟಿ ಯೋಜನೆ

Garantee
Published on

ಹೊನ್ನಾವರ: ಗ್ಯಾರಂಟಿ ಯೋಜನೆಯಿಂದ ಯಾರೂ ವಂಚಿತರಾಗಬಾರದು ಎಂದು ಸರ್ಕಾರ ಗ್ಯಾರಂಟಿ ಪ್ರಾಧಿಕಾರ ರಚಿಸಿದೆ. ಬಡವರ ಅನುಕೂಲಕ್ಕಾಗಿ ಈ ಯೋಜನೆ ಜಾರಿಯಾಗಿದ್ದು, ಉಳ್ಳವರು ಇದರ ಪ್ರಯೋಜನ ಪಡೆದುಕೊಳ್ಳಬಾರದು’ ಎಂದು ಸಚಿವ ಮಂಕಾಳ ವೈದ್ಯ ಮನವಿ ಮಾಡಿದರು.

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಸತೀಶ್ ನಾಯ್ಕ ಮಾತನಾಡಿ, ಮಧ್ಯವರ್ತಿಗಳಿಲ್ಲದೆ ನೇರವಾಗಿ ಬಡವರ ಖಾತೆಗೆ ಜಮಾ ಆಗುತ್ತಿದೆ. ಯೋಜನೆ ತಲುಪದೇ ಇದ್ದವರ ಮನೆಗೆ ಹೋಗಿ ಕರೆತಂದು ಕೆಲಸ ಮಾಡಿಕೊಡುವ ಜವಾಬ್ದಾರಿಯನ್ನು ಪ್ರಾಧಿಕಾರ ಮಾಡುತ್ತದೆ ಎಂದರು.

ತಾಲೂಕು ಸಮಿತಿ ಅಧ್ಯಕ್ಷ ಅಣ್ಣಪ್ಪ ನಾಯ್ಕ ಮಾತನಾಡಿ, ಸರ್ಕಾರ ಐದು ಗ್ಯಾರಂಟಿ ಯೋಜನೆಯ ಮೂಲಕ ಆರ್ಥಿಕ ಬಲ ನೀಡಿದೆ. ಇದನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಲು ಕಾರ್ಯ ಮಾಡುತ್ತೇವೆ ಎಂದರು.

ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ ನಾಯ್ಕ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಜಿ.ಎಸ್ ನಾಯ್ಕ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net