ನರೇಗಲ್ಲನಲ್ಲಿ ಗ್ಯಾರಂಟಿ ಯೋಜನೆ ಶೇ. 98 ಯಶಸ್ವಿ

NRGL GUARANTEE
Published on

ನರೇಗಲ್ಲ: ಸ್ಥಳೀಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರ ಪಂಚ ಗ್ಯಾರಂಟಿಗಳ ಅನುಷ್ಠಾನವು ಶೇ. 98ರಷ್ಟಾಗಿದೆ ಎಂದು ಗಜೇಂದ್ರಗಡ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶರಣಪ್ಪ ಬೆಟಗೇರಿ ಹೇಳಿದರು.

ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಜರುಗಿದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ತಾಲೂಕಿನ ಶಾಸಕ ಜಿ.ಎಸ್. ಪಾಟೀಲರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ತಾಲೂಕಿನಾದ್ಯಂತ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಯಶಸ್ವಿಯಾಗಿದೆ. ಈ ಯಶಸ್ಸಿಗೆ ಕಾರಣೀಕರ್ತರಾದ ಅಂಗನವಾಡಿ ಕಾರ್ಯಕರ್ತೆಯರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಬಾಕಿ ಉಳಿದಿರುವ ಫಲಾನುಭವಿಗಳಿಗೆ ಯೋಜನೆ ತಲುಪಿಸಲು ಮನೆಮನೆ ಸಮೀಕ್ಷೆ ನಡೆಸಿ ಶೇ. 100ರಷ್ಟು ಯಶಸ್ವಿಗೊಳಿಸಲು ಶ್ರಮಿಸಬೇಕು ಎಂದು ಸೂಚಿಸಿದರು.

ಅಂಗನವಾಡಿ ಮೇಲ್ವಿಚಾರಕಿ ರಾಧಿಕಾ ಪವಾರ ಮಾಹಿತಿ ನೀಡಿ, ಪಟ್ಟಣದ 6ನೇ ವಾರ್ಡಿನಲ್ಲಿ ಇನ್ನೂ 44 ಫಲಾನುಭವಿಗಳು ಯೋಜನೆಯ ಲಾಭ ಪಡೆದಿಲ್ಲ. ಇದಕ್ಕೆ ಹಲವಾರು ತಾಂತ್ರಿಕ ಕಾರಣಗಳಿದ್ದು, ಇನ್ನು ಕೆಲವೇ ದಿನಗಳಲ್ಲಿ ಅದೆಲ್ಲವನ್ನೂ ಸರಿಪಡಿಸಿ ಅವರಿಗೂ ಯೋಜನೆಯ ಲಾಭ ತಲುಪಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಶಿವನಗೌಡ ಪಾಟೀಲ, ಪಪಂ. ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ ಮಾತನಾಡಿದರು. ಸಭೆಯಲ್ಲಿ ಪಪಂ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಗ್ಯಾರಂಟಿ ಸಮಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಮುತ್ತಪ್ಪ ನೂಲ್ಕಿ ಉಪಸ್ಥಿತರಿದ್ದರು.

ಪಪಂ ಅಧ್ಯಕ್ಷ ಫಕೀರಪ್ಪ ಮಳ್ಳಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಾಧಿಕಾರಿ ಮಹೇಶ ನಿಡಶೇಶಿ ಸರ್ವರನ್ನೂ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net