ಮೈಸೂರು: ನಮ್ಮ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿಗಳು ಸಾಕಷ್ಟು ಅನುಕೂಲ ಮಾಡಿವೆ ಎಂದು ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶ್ರೀನಿವಾಸ ಆಚಾರ್ ತಿಳಿಸಿದರು.
ಈ ಹಿಂದಿನ ಸರ್ಕಾರಗಳು ನಮ್ಮ ಸಮುದಾಯವನ್ನು ನಿರ್ಲಕ್ಷಿಸಿದ್ದವು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಸಮುದಾಯಕ್ಕೆ ಬೇಕಾದ ಸೌಲಭ್ಯ ಒದಗಿಸುತ್ತಿವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾಂಗ್ರೆಸ್‌ನ ಐದು ಗ್ಯಾರಂಟಿಗಳು ವಿಶ್ವಕರ್ಮ ಸಮುದಾಯದವರ ಪ್ರಗತಿಗೆ ಸಹಕಾರಿಯಾಗಿವೆ. ತಾಲೂಕು ಕೇಂದ್ರಗಳಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮುಖಂಡರಾದ ಎಂ.ಮೊಗಣ್ಣಾರ್, ಬನ್ನೂರು ಎ.ಎನ್. ಸ್ವಾಮಿ, ಎಸ್. ನಾಗರಾಜು, ಸಿದ್ದಪ್ಪಾಜಿ, ರಾಜು ಇತರರು ಇದ್ದರು.