

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಅಽಕಾರಿಗಳು ಕಾಳಜಿಪೂರ್ವಕವಾಗಿ ಅನುಷ್ಠಾನಗೊಳಿಸಬೇಕು. ಅನ್ನಭಾಗ್ಯ ಯೋಜನೆ ಕುರಿತು ದೂರುಗಳು ಬಂದಿವೆ. ಸರ್ಕಾರದ ನಿಯಮ ಪಾಲಿಸದ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಪಡಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಽಕಾರದ ಜಿಲ್ಲಾ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕೈಗೊಂಡ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ದೇಶಕ್ಕೆ ಮಾದರಿಯಾವಗ ಯೋಜನೆಗಳನ್ನು ಜಾರಿ ಮಾಡಿದೆ. ಗ್ಯಾರಂಟಿಗಳ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 5ರಿಂದ 6 ಸಾವಿರ ರೂಪಾಯಿ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ಇದುವರೆಗೆ 13 ಕೋಟಿಗೂ ಹೆಚ್ಚು ಮಹಿಳೆಯರು ಪ್ರಯಾಣಿಸಿದ್ದಾರೆ. ಗೃಹ ಜ್ಯೋತಿ ಯೋಜನೆಗೆ 4,83,900 ನೋಂದಣಿ ಆಗಿದ್ದು, ಶೇ. 87.29ರಷ್ಟು ಸಾಧನೆಯಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ 3,49,828 ಬಿಪಿಎಲ್ ಪಡಿತರ ಚೀಟಿದಾರರಿದ್ದು, 235.457 ಕೋಟಿ ರೂ. ನಗದು ವರ್ಗಾವಣೆ ಆಗಿದೆ. ತಾಂತ್ರಿಕ ಕಾರಣಗಳಿಂದ ಬಾಕಿ ಇರುವ 8,344 ಜನರಿಗೆ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗೃಹ ಲಕ್ಷ್ಮೀ ಯೋಜನೆಯಡಿ 3,66,734 ಮಹಿಳೆಯರು ನೋಂದಣಿ ಆಗಿದ್ದಾರೆ. 2023ರ ಆಗಸ್ಟ್ನಿಂದ 2024ರ ಮೇವರೆಗೆ 31,54,147 ಜನರಿಗೆ ಹಣ ಜಮೆ ಮಾಡಲಾಗಿದೆ. ಇನ್ನೂ ಕೆಲವರು ಅರ್ಜಿ ಸಲ್ಲಿಸಲು ತಾಂತ್ರಿಕ ಸಮಸ್ಯೆ ಇದ್ದು, ಸರಿಪಡಿಸಬೇಕು. ಯುವನಿಽ ಯೋಜನೆಯಡಿ ಜಿಲ್ಲೆಯಲ್ಲಿ 1,422 ಯುವಕರು ಹಾಗೂ 1,808 ಯುವತಿಯರಿಗೆ ಸಹಾಯಧನ ವಿತರಿಸಲಾಗಿದೆ ಎಂದರು.
ಪ್ರಾಽಕಾರದ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ಉಪ ಕಾರ್ಯದರ್ಶಿ ದೀಪಕ ಮಡಿವಾಳರ ಮಾಹಿತಿ ನೀಡಿದರು.
ಜಿಲ್ಲಾ ಸಮಿತಿ ಸದಸ್ಯರು, ತಾಲೂಕು ಸಮಿತಿ ಅಧ್ಯಕ್ಷರು ಹಾಗೂ ಹೆಸ್ಕಾಂ, ಸಾರಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೌಶಲ್ಯ ಅಭಿವೃದ್ಧಿ ಮತ್ತು ಆಹಾರ ಇಲಾಖೆ ಅಽಕಾರಿಗಳು ಪ್ರಗತಿ ವರದಿ ಸಲ್ಲಿಸಿದರು.