ನೆಮ್ಮದಿಯ ಜೀವನಕ್ಕೆ ‘ಗ್ಯಾರಂಟಿ’ ಅನುಕೂಲ

20sdp2- Bhimanna Naik
Published on

ಸಿದ್ದಾಪುರ: ಬಡವರು ಹಾಗೂ ನೊಂದ ಜನರಿಗೆ ಆರ್ಥಿಕ ಶಕ್ತಿ ತುಂಬುವ ಮೂಲಕ ನೆಮ್ಮದಿಯ ಜೀವನ ನಡೆಸಲೆಂದು ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯನ್ನು ಕೆಲ ಉಳ್ಳವರು ಟೀಕಿಸುತ್ತಿರುವುದು ಬಡವರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಬುಧವಾರ ಪಟ್ಟಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು.

ನೊಂದ ವರ್ಗಕ್ಕೆ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಯನ್ನು ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ. ಪಂಚ ಗ್ಯಾರಂಟಿಗಳನ್ನು ಜನತೆ ಸಂತಸದಿಂದ ಸ್ವೀಕರಿಸುತ್ತಿರುವಾಗ ಉಳ್ಳವರು ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ ಮಾತನಾಡಿ ತಾಲೂಕಿನಲ್ಲಿ ತಾಂತ್ರಿಕ ಕಾರಣದಿಂದ 682 ಅರ್ಜಿಗಳು ಮಾತ್ರ ಪೆಂಡಿಂಗ್ ಇವೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಪಂಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಿಗೆ ಶಾಸಕ ಭೀಮಣ್ಣ ನಾಯ್ಕ ಗುರುತಿನ ಚೀಟಿ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net