ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ

MNd
Published on


ಮುಂಡಗೋಡ: ಬಡವರಿಗೆ ಅನುಕೂಲವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆಗಳು ನಿಲ್ಲುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದರು.

ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಶೇ.90ರಷ್ಟು ಜನರು ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ನೂರಾರು ಶ್ರೀಮಂತರು ಗ್ಯಾರಂಟಿ ಯೋಜನೆಗಳು ತಮಗೆ ಬೇಡವೆಂದು ಬರೆದು ಕೊಟ್ಟಿದ್ದಾರೆ ಎಂದರು.

ಶಾಸಕ ಶಿವರಾಮ ಹೆಬ್ಬಾರ, ಮಾಜಿ ಶಾಸಕ ವಿ.ಎಸ್.ಪಾಟೀಲ, ಗ್ಯಾರಂಟಿ ಯೊಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಸತೀಶ ನಾಯ್ಕ ತಾಲೂಕಾಧ್ಯಕ್ಷ ರಾಜಶೇಖರ ಹಿರೇಮಠ, ಶಿರಸಿ ಉಪ ವಿಭಾಗಾಧಿಕಾರಿ ಕೆ.ವಿ. ಕಾವ್ಯರಾಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ, ತಹಸೀಲ್ದಾರ್ ಶಂಕರ ಗೌಡಿ, ಟಿ.ವೈ.ದಾಸನಕೊಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net