

ಹಿರಿಯೂರು: ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆ ರಾಜ್ಯದ ಎಲ್ಲ ವರ್ಗದ ಜನರ ಪಾಲಿಗೆ ವರದಾನವಾಗಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಬೆಂಗಳೂರಿನಿಂದ ಹೊಸದುರ್ಗಕ್ಕೆ ತೆರಳುವ ಮಾರ್ಗ ಮಧ್ಯೆ ಹಿರಿಯೂರಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದ ಸಂದರ್ಭ ಮಾತನಾಡಿದರು.
ಚುನಾವಣೆಯಲ್ಲಿ ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಲು ಗ್ಯಾರಂಟಿ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರದ ದೃಢ ನಿರ್ಧಾರದೊಂದಿಗೆ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು.
ಪಂಚ ಗ್ಯಾರಂಟಿ ಯೋಜನೆ ಮೂಲಕ ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಸಾಧಿಸುವ ಸಂಕಲ್ಪ ಮಾಡಲಾಗಿದೆ. ಸರ್ಕಾರದ ಜನಪರ ಯೋಜನೆಗೆ ಕುರಿತು ಪಕ್ಷದ ಕಾರ್ಯಕರ್ತರು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕೆಪಿಸಿಸಿ ಸದಸ್ಯ ಸುರೇಶ್ ಬಾಬು, ಈಗಲಿಂಗೇಗೌಡ, ರಂಗಸ್ವಾಮಿ, ಗಿರೀಶ್, ನಾಗರಾಜ್, ಜ್ಞಾನೇಶ್, ಮಲ್ಲನಾಯಕ್, ಪ್ರಸನ್ನಕುಮಾರ್, ಶಿವಕುಮಾರ್, ಪ್ರದೀಪ್, ರಾಜೇಶ್, ಹರೀಶ್, ಜಿ.ದಾದಾಪೀರ್ ಇದ್ದರು.