

ಸುಬ್ರಹ್ಮಣ್ಯ: ಸಂಸ್ಥೆಗಳ ಸಿಎಸ್‌ಆರ್ ಅನುದಾನ ಬಳಸಿ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಕೆಲಸ ನಡೆಯುತ್ತಿರುವುದು ಶ್ಲಾಘನೀಯ. ಬಳ್ಪ ಗ್ರಾಪಂ ವ್ಯಾಪ್ತಿಯಲ್ಲಿ ಈಗಾಗಲೇ ವಿವಿಧ ಅಭಿವೃದ್ಧಿ ಕೆಲಸ ನಡೆದಿದ್ದು, ಮುಂದಿನ ದಿನಗಳಲ್ಲಿ ಇಲ್ಲಿನ ಬೇಡಿಕೆ ಈಡೇರಿಸಲು ಅನುದಾನ ನೀಡಲಾಗುವುದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಬಳ್ಪ ಗ್ರಾಪಂ ವ್ಯಾಪ್ತಿಯ ಕೇನ್ಯ ಗ್ರಾಮದ ಕೇನ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಎಂಆರ್‌ಪಿಎಲ್ ಸಂಸ್ಥೆಯ ಸಿಎಸ್‌ಆರ್ ಅನುದಾನ 7 ಲಕ್ಷ ರೂ.ದಲ್ಲಿ ನಿರ್ಮಾಣವಾಗಲಿರುವ ಶೌಚಗೃಹಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಬಳ್ಪ ಗ್ರಾಮ ಪಂಚಾಯಿತಿ ಸದಸ್ಯರಾದ ಕುಸುಮಾವತಿ ರೈ, ರಾಜೀವ ಕಣ್ಕಲ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವಾಸುದೇವ ಆನೆಮನೆ, ಪ್ರಮುಖರಾದ ವಸಂತ ನಡುಬೈಲು, ಶಾಲಾ ಶಿಕ್ಷಕಿ ಪ್ರೇಮಾ, ಬಳ್ಪ-ಕೇನ್ಯ ಗ್ರಾಮ ವಿಕಾಸ ಪ್ರತಿಷ್ಠಾನದ ವಿನೋದ್ ಬೊಳ್ಮಲೆ ಉಪಸ್ಥಿತರಿದ್ದರು.