

ಕಡಬ: ಕಡಬ ತಾಲೂಕು ಕೊಂಬಾರು ಗ್ರಾಮದ ಓಡೋಳಿ ಎಂಬಲ್ಲಿ ರಾಜ್ಯ ವಿಪತ್ತು ಉಪಶಮನ ನಿಧಿಯಿಂದ 50 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಸೇತುವೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿ ಪೂಜೆ ನೆರವೇರಿಸಿ, ಸುಳ್ಯ ಕ್ಷೇತ್ರ ತೀರಾ ಗ್ರಾಮೀಣ ಭಾಗಗಳನ್ನು ಒಳಗೊಂಡಿದೆ. ಹಲವಾರು ಕಡೆಗಳಿಂದ ಅಭಿವೃದ್ಧಿ ಕಾರ್ಯಗಳ ಬೇಡಿಕೆಗಳು ಬರುತ್ತಿವೆ. ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸಲಾಗುವುದು ಎಂದರು.
ಕೊಂಬಾರು ಗ್ರಾಪಂ ಅಧ್ಯಕ್ಷ ಮಧುಸೂಧನ್ ಓಡೋಳಿ, ಸದಸ್ಯರಾದ ಚೆನ್ನಕೇಶವ, ಸುಶೀಲ, ಜಯಶ್ರೀ, ವೀಣಾ, ಸರಿತಾ, ನಿತ್ಯಾನಂದ ಪಿ., ಗಣೇಶ್ ಪ್ರಸಾದ್, ಜಿ.ಪಂ. ಮಾಜಿ ಸದಸ್ಯ ಕೃಷ್ಣ ಶೆಟ್ಟಿ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಪುತ್ತೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಭರತ್ ಬಿ.ಎಂ., ಜೂನಿಯಾರ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ, ಕಡಬ ತಾಪಂ ಸಹಾಯಕ ನಿರ್ದೇಶಕ ಯಶವಂತ ಬೆಳ್ಚಡ, ಬಿಳಿನೆಲೆ ಸಿಎ ಬ್ಯಾಂಕ್ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಎಪಿಎಂಸಿ ಮಾಜಿ ಸದಸ್ಯ ಮೇದಪ್ಪ ಗೌಡ ಡೆಪ್ಪುಣಿ, ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ದೇವಕಿ, ತಾಪಂ ಐ.ಇ.ಸಿ ಸಂಯೋಜಕ ಭರತ್‌ರಾಜ್, ಗುತ್ತಿಗೆದಾರ ಅವಿನಾಶ್ ಪಲ್ಲಿಗದ್ದೆ ಮೊದಲಾದವರಿದ್ದರು. ಪಿಡಿಒ ರಾಘವೇಂದ್ರ ಗೌಡ ಸ್ವಾಗತಿಸಿದರು. ಗ್ರಾಪಂ ಸಿಬ್ಬಂದಿ ಲೋಕನಾಥ ಕೆ. ವಂದಿಸಿದರು.