

ಗುರುಪುರ: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಕೈಕಂಬ-ಕಾಮಪಾದೆವರೆಗೆ 1 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಏ.28ರಂದು ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ಹಿಂದಿನ ಅವಧಿಯಲ್ಲಿ ಈ ಭಾಗದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ನಡೆದಿವೆ. ಈ ಭಾಗದ ಬಹುದಿನಗಳ ಬೇಡಿಕೆಯಂತೆ ಇದೀಗ ಈ ರಸ್ತೆ ಅಭಿವೃದ್ಧಿಗೊಳ್ಳುತ್ತಿದೆ. 5.75 ಅಗಲದೊಂದಿಗೆ ಒಟ್ಟು 500 ಮೀಟರ್ ಉದ್ದಕ್ಕೆ ರಸ್ತೆ ಅಭಿವೃದ್ಧಿಗೊಳ್ಳಲಿದೆ. ಮಳೆಗಾಲಕ್ಕೆ ಮುಂಚೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಕಂದಾವರ ಗ್ರಾಪಂ ಅಧ್ಯಕ್ಷೆ ಶಾಲಿನಿ, ಉಪಾಧ್ಯಕ್ಷ ಉದಯ ಕುಮಾರ್, ಸದಸ್ಯರಾದ ಸುದರ್ಶನ್ ಕವಿತಾ, ಅದ್ರಮೋನು, ತಾಪಂ ಮಾಜಿ ಸದಸ್ಯ ವಿಶ್ವನಾಥ ಶೆಟ್ಟಿ, ಗಂಜಿಮಠ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಶೋಧನ್ ಆದ್ಯಪಾಡಿ, ಉತ್ತರ ಮಂಡಲ ಉಪಾಧ್ಯಕ್ಷ ಸೋಹನ್ ಅತಿಕಾರಿ, ಬಿಜೆಪಿ ಮುಖಂಡರಾದ ಭರತ್‌ರಾಜ್ ಕೃಷ್ಣಾಪುರ, ಅಮೃತಲಾಲ್ ಜಾಯ್ಸ ಡಿಸೋಜ, ಬೂತ್ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.