

ವಿಜಯವಾಣಿ ಸುದ್ದಿಜಾಲ ಕಾರ್ಕಳ
ಕಚೇರಿಗಳು ಚೆನ್ನಾಗಿದ್ದಾಗ ಕೆಲಸ ಕಾರ್ಯಗಳು ಚೆನ್ನಾಗಿ ನಡೆಯುತ್ತವೆ. ಗ್ರಾಮ ಪಂಚಾಯಿತಿಗಳಿಗೆ ಸುಸಜ್ಜಿತ ಹಾಗೂ ಸ್ವಂತ ಕಟ್ಟಡಗಳಿದ್ದಾಗ ಮುಕ್ತವಾಗಿ ಕರ್ತವ್ಯ ನಡೆಸಿ ಜನರ ಸೇವೆಗೆ ಸಹಕಾರಿಯಾಗುತ್ತದೆ ಎಂದು ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು. ಸೋಮವಾರ ಬೆಳ್ಮಣ್ ಗ್ರಾಮ ಪಂಚಾಯಿತಿನಲ್ಲಿ ನೂತನ ಸಭಾಂಗಣದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಪಂಚಾಯಿತಿ ಅಧ್ಯಕ್ಷೆ ರಾಮೇಶ್ವರಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಉಪ್ಯಾಧ್ಯಕ್ಷ ಸಂದೀಪ್ ಅಂಚನ್, ಇಂಜಿನಿಯರ್ ದೇವಿಪ್ರಕಾಶ್, ಸದಾನಂದ ನಾಯಕ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ರೇಷ್ಮಾ ಉದಯ ಶೆಟ್ಟಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಆಶಾ ದೇವೇಂದ್ರ ಶೆಟ್ಟಿ, ನಂದಳಿಕೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಬೆಳ್ಮಣ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶಂಕರ್ ಕುಂದರ್, ಮಲ್ಲಿಕಾ ರಾವ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಸೂರ್ಯಕಾಂತ ಶೆಟ್ಟಿ, ಸರ್ವಜ್ಞ ತಂತ್ರಿ, ಮೋಹನದಾಸ ಶೆಟ್ಟಿ, ದೇವೇಂದ್ರ ಶೆಟ್ಟಿ, ಮುಂಡ್ಕೂರು ರವೀಂದ್ರ ಶೆಟ್ಟಿ, ವಲೇರಿಯನ್, ಜೇರಿ ಎಲ್.ಡಿಸೋಜ, ಪಂಚಾಯಿತಿ ಸದಸ್ಯರು, ಸಿಬಂದಿ ಇದ್ದರು. ಪಿಡಿಒ ಮಮತಾ ವೈ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕ್ಷೇತ್ರದ ಎಲ್ಲ ಪಂಚಾಯಿತಿಗಳಿಗೂ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸಹಕಾರಿಸುತ್ತೇನೆ. ಬೆಳ್ಮಣ್‌ನ ನೂತನ ಕಟ್ಟಡ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ನೀಡುತ್ತೇನೆ.-ಸುನೀಲ್‌ಕುಮಾರ್ ಶಾಸಕ