

ಉಳ್ಳಾಲ: ಬೋಳಿಯಾರ್ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ರಸ್ತೆ ಸಹಿತ ಇತರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇದೇ ವೇಳೆ ಇನೋಳಿಯಿಂದ ಅಮ್ಮೆಂಬಳ ಮುಖ್ಯರಸ್ತೆ ಅಗಲೀಕರಣ ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ ಎಂದು ಬೋಳಿಯಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ಶಕೂರು ತಿಳಿಸಿದ್ದಾರೆ.
ಬೋಳಿಯಾರ್ ಗ್ರಾಮದ ಅಮ್ಮೆಂಬಳ ಕೋಟೆ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ನಡೆದ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ಥಳೀಯರ ಹಲವು ವರ್ಷಗಳ ಬೇಡಿಕೆಯಂತೆ ರಸ್ತೆ ಕಾಂಕ್ರೀಟ್ ಕಾಮಗಾರಿ ನಡೆಯಲಿದೆ. ಗ್ರಾಮದಲ್ಲಿ ಬಾಕಿಯಿರುವ ಕೆಲಸ ವಿವಿಧ ಹಂತಗಳಲ್ಲಿ ನಡೆಯಲಿದೆ. ಗ್ರಾಮದ ಎಲ್ಲ ಒಳರಸ್ತೆಗಳ ಅಭಿವೃದ್ಧಿಗೆ ಏಕಕಾಲದಲ್ಲಿ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಯೂ ಪೂರ್ಣಗೊಳ್ಳಲಿದೆ ಎಂದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಬೋಳಿಯಾರ್ ಗ್ರಾ.ಪಂ.ಮಾಜಿ ಅಧ್ಯಕ್ಷೆ ಜೆಸಿಂತಾ ಪಿಂಟೋ, ಸದಸ್ಯರಾದ ಶಾರದಾ, ಸಯೀದಾ, ಸಿದ್ದೀಕ್, ಮೈಮುನಾ, ಸಮೀರ್, ಬೋಳಿಯಾರ್ ವಲಯ ಕಾಂಗ್ರೆಸ್ ಅಧ್ಯಕ್ಷ ಮಹಮ್ಮ ದ್, ಪ್ರಮುಖರಾದ ಸುದರ್ಶನ್ ಶೆಟ್ಟಿ, ದಾಮೋದರ್ ಇನ್ನಿತರರಿದ್ದರು. ಮಂಗಳೂರು ತಾ.ಪಂ. ಮಾಜಿ ಸದಸ್ಯ ಅಬ್ದುಲ್ ಜಬ್ಬಾರ್ ಬೋಳಿಯಾರ್ ನಿರೂಪಿಸಿದರು.