ಗುಡ್ಡೆಕಲ್ ಆಡಿಕೃತ್ತಿಕೆ ಹರೋಹರ ಜಾತ್ರೆ! ಯಾವಾಗ? ಏನೇನು ಕಾರ್ಯಕ್ರಮ ಇಲ್ಲಿದೆ ಮಾಹಿತಿ

guddekal
ಗುಡ್ಡೆಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ
Published on

ಶಿವಮೊಗ್ಗ: ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ನಿಂದ ಗುಡ್ಡೇಕಲ್‌ನ ದೇವಸ್ಥಾನದಲ್ಲಿ ಆ.8ರಂದು ಭರಣಿ, ಕಾವಡಿ ಉತ್ಸವ ಹಾಗೂ 9ರಂದು ಆಡಿಕೃತ್ತಿಕೆ ಹರೋಹರ ಜಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಿ.ರಾಜಶೇಖರಪ್ಪ ತಿಳಿಸಿದರು.

ಈ ಜಾತ್ರೆಗೆ ಹರಕೆ ಕಾವಡಿಯನ್ನು ಸಲ್ಲಿಸಲು ಶಿವಮೊಗ್ಗ ತಾಲೂಕು, ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತಾದಿಗಳು ಆಗಮಿಸಲಿದ್ದಾರೆ. ಜಾತ್ರೆ ಅಂಗವಾಗಿ ಅಂದು ಬೆಳಗ್ಗೆ 4 ಗಂಟೆಯಿAದಲೇ ಕಾವಡಿ ಹೊತ್ತ ನೂರಾರು ಭಕ್ತರು ಕುಟುಂಬ ಸಮೇತ ನಗರದ ನಾನಾ ಭಾಗದಿಂದ ಪಾದಯಾತ್ರೆ ಮೂಲಕ ಬಂದು ಹರಕೆ ತೀರಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಳೆದೆರಡು ವರ್ಷಗಳಿಂದ ಕರೊನಾ ಹಿನ್ನೆಲೆಯಲ್ಲಿ ಜಾತ್ರೆ ಅದ್ಧೂರಿಯಾಗಿ ನಡೆದಿರಲಿಲ್ಲ. ಈ ಬಾರಿ ಜಾತ್ರೆಗೆ 2 ಲಕ್ಷಕ್ಕಿಂತ ಅಽಕ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದ್ದು ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸುವಂತೆ ಹಾಗೂ ಬಿಗಿ ಬಂದೋಬಸ್ತ್ಗಾಗಿ ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಳ್ಳಲಾಗಿದೆ. ಹಾಗಾಗಿ ಸಮಿತಿಯಿಂದ 400 ಸ್ವಯಂ ಸೇವಕರನ್ನು ನೇಮಿಸಲಾಗುವುದು. ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದರು.
ಟ್ರಸ್ಟ್ನಿAದ ಗುಡ್ಡೇಕಲ್ ಗುಡ್ಡದ ಮೇಲೆ ವಿಶ್ವದಲ್ಲೇ ಅತಿ ಎತ್ತರದ 151 ಅಡಿ ಶ್ರೀಬಾಲಸುಬ್ರಹ್ಮಣ್ಯ ಸ್ವಾಮಿ ವಿಗ್ರಹ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದು ವಿಗ್ರಹದ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದರು. ಉಪಾಧ್ಯಕ್ಷ ಎಂ.ಪಿ.ಸAಪತ್, ಕಾರ್ಯದರ್ಶಿ ಪಿ.ರಘುಕುಮಾರ್, ಖಜಾಂಚಿ ಪಿ.ರವಿಕುಮಾರ್, ಸಹ ಕಾರ್ಯದರ್ಶಿ ಎಂ. ಲೋಕೇಶ್, ಟ್ರಸ್ಟಿಗಳಾದ ಪಿ.ಸುಬ್ರಮಣಿ, ಅರ್ಜುನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net