ಗುಡ್ಡೆಹೊಸೂರು ಗ್ರಾ.ಪಂ.ನಿ0ದ ಪರಿಸರ ದಿನಾಚರಣೆ

guddehosur
Published on

ಕುಶಾಲನಗರ:

ಗುಡ್ಡೆಹೊಸೂರು ಗ್ರಾಮ ಪಂಚಾಯತ್, ಟಿಜಿಐ ರೀಡೋಲೆಂಟ್ ರೆಸಾರ್ಟ್ ಮತ್ತು ಸ್ಪಾ ಸಂಯುಕ್ತ ಆಶ್ರಯದಲ್ಲಿ ಗುರುವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು.

ಚಿಕ್ಕಬೆಟಗೇರಿ ಗ್ರಾಮದಲ್ಲಿ ಗಿಡಗಳನ್ನು ನೆಡುವ ಮೂಲಕ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಂ.ಆರ್. ಸುಮೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಚಿಕ್ಕಬೆಟಗೇರಿಯಿಂದ ಗುಡ್ಡೆ ಹೊಸೂರು ಸರ್ಕಲ್ ತನಕ ರಾಜ್ಯ ಹೆದ್ದಾರಿಯ ಎರಡು ಬದಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯಾ, ಉಪಾಧ್ಯಕ್ಷ ಪ್ರವೀಣ್ ಕುಮಾರ್, ರೆಸಾರ್ಟ್ ಜನರಲ್ ಮ್ಯಾನೇಜರ್ ಶರಣ್ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net