ಗುಡ್ಡೆಹೊಸೂರು ಗ್ರಾಮ ಸಭೆ ರದ್ದು

30Kush02
Published on


ಮಡಿಕೇರಿ: ಕೆಲವು ಇಲಾಖೆಯ ಅಧಿಕಾರಿಗಳ ಗೈರುಹಾಜರಾದ ಹಿನ್ನೆಲೆಯಲ್ಲಿ ಮಂಗಳವಾರ ನಿಗದಿಯಾಗಿದ್ದ ಗ್ರಾಮ ಸಭೆಯನ್ನು ರದ್ದುಗೊಳಿಸಲಾಯಿತು.


ಕುಶಾಲನಗರದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆಯಲ್ಲಿ ಗ್ರಾಮದ ಸಮುದಾಯ ಭವನದಲ್ಲಿ ಸಭೆ ಆಯೋಜಿಸಲಾಗಿತ್ತು.


ಗ್ರಾಮದಲ್ಲಿ ಪ್ರಮುಖವಾಗಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿದ್ದವು. ಆದರೆ, 4 ವರ್ಷಗಳಿಂದ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗ್ರಾಮ ಸಭೆಗೆ ಆಗಮಿಸಿಲ್ಲ. ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಗ್ರಾಮಸ್ಥರು ಕೂಡ ಸಭೆಯಲ್ಲಿ ಪಾಲ್ಗೊಳ್ಳಲು ಮುಂದಾಗುತ್ತಿಲ್ಲ. ಆದ್ದರಿಂದ ಅವರನ್ನು ಸಭೆಗೆ ಕರೆಸಿ ನಂತರ ಸಭೆ ಮುಂದುವರಿಸಬೇಕು ಎಂದು ಶಶಿಕುಮಾರ್, ಸಂತೋಷ್, ಸಲಿ ಒತ್ತಾಯಿಸಿದರು.


ಎಲ್ಲ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗ್ರಾಮಸಭೆ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆ ಮುಂದೂಡುವಂತೆ ಒತ್ತಾಯಿಸಿದರು. ಇಲಾಖೆ ಅಧಿಕಾರಿಗಳ ಬದಲಿಗೆ ಗ್ರಾಪಂ ಮೂಲಕ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿ ಗ್ರಾಪಂ ಆಡಳಿತ ವಹಿಸಿಕೊಂಡಲ್ಲಿ ಮಾತ್ರ ಸಭೆ ಮುಂದುವರಿಸುವಂತೆ ಆಗ್ರಹಿಸಿದರು.


ಗುಡ್ಡೆಹೊಸೂರು-ರಸಲ್ಪುರ ರಸ್ತೆ ಕಾಮಗಾರಿ ಸಂದರ್ಭ ರಸ್ತೆ ಬದಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿಲ್ಲ. ಕಾಮಗಾರಿ ಪೂರ್ಣಗೊಂಡು 3 ವರ್ಷ ಕಳೆದಿದೆ. ಅಧಿಕಾರಿ ಬದಲಿಗೆ ಸಹಾಯಕರು ಸಭೆಯಲ್ಲಿ ಪಾಲ್ಗೊಂಡಲ್ಲಿ ಅವರಿಂದ ಸಮಸ್ಯೆ ನಿವಾರಣೆ ಸಾಧ್ಯವಿಲ್ಲ. ಆದ್ದರಿಂದ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ರನ್ನು ಕಡ್ಡಾಯವಾಗಿ ಸಭೆಗೆ ಕರೆಸುವಂತೆ ಒತ್ತಾಯಿಸಿದರು.

ಸಭೆಗೆ ಹೈರಾದ ಹಿನ್ನೆಲೆಯಲ್ಲಿ ಗ್ರಾಮ ಸಭೆ ಮುಂದೂಡಲಾಯಿತು. ಗ್ರಾಪಂ ಉಪಾಧ್ಯಕ್ಷ ಪುಟ್ಟಮಾದಪ್ಪ, ಪಿಡಿಒ ಸುಮೇಶ್, ನಂಗಾರೂ ಜಗ, ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net