ಗುಡೇಕೋಟೆ ಸಾಯಿಬಾಬಾ ದೇವಸ್ಥಾನ ಬಳಿ ಕರಡಿ ಪ್ರತ್ಯಕ್ಷ

Kudlgi Karadi
Published on

ಕೂಡ್ಲಿಗಿ: ಗುಡೇಕೋಟೆ ಗ್ರಾಮದ ಹೊರವಲಯದಲ್ಲಿರುವ ಶ್ರೀ ಸಾಯಿಬಾಬಾ ದೇವಸ್ಥಾನದಲ್ಲಿ ರಾತ್ರಿ ಕರಡಿ ಪ್ರತ್ಯಕ್ಷವಾಗಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಗ್ರಾಮ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ನಿತ್ಯ ಕರಡಿಗಳು ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಕೆರೆ ಕೋಡಿ ಹತ್ತಿರದಲ್ಲಿರುವ ಸಾಯಿಬಾಬಾ ದೇವಸ್ಥಾನ ಬಳಿ ಶನಿವಾರ ರಾತ್ರಿ 8:30ರ ಸುಮಾರಿಗೆ ಬಂದ ಕರಡಿ, ದೇವಸ್ಥಾನದ ಒಳಗೆ ಹೋಗುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈವರೆಗೆ ಜಮೀನುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕರಡಿಗಳು ಗ್ರಾಮದೊಳಗೆ ನುಗ್ಗಿರುವುದು ಜನರಲ್ಲಿ ಭಯವನ್ನು ಹೆಚ್ಚಿಸಿದೆ. ರೈತರು ಹೊಲಗಳಲ್ಲಿ ಕೆಲಸ ಮಾಡಿ ಸಂಜೆ ಮನೆಗೆ ಹೊಗುವುದು ಸಹಜ.

ಇಂಥ ಸಂಧರ್ಭದಲ್ಲಿ ಕರಡಿ ದಾಳಿ ಮಾಡಿದರೆ ಯಾರು ಹೊಣೆ?. ಗ್ರಾಮದ ಸುತ್ತ ಜಂಗಲ್ ಕಟಿಂಗ್ ಮಾಡಿಸಲು ಮನವಿ ಮಾಡಿದರೂ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net