ಅತಿಥಿ ಉಪನ್ಯಾಸಕರ ಧರಣಿ ಇಂದಿನಿಂದ

Published on

ಸಿಂಧನೂರು: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಅ.16 ರಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ಗಳ ಅತಿಥಿ ಉಪನ್ಯಾಸಕರ ಸಂಘದ ತಾಲೂಕು ಅಧ್ಯಕ್ಷ ವಿಶ್ವನಾಥ ಪಾಟೀಲ್ ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡಿದ್ದರೂ ಕೆಲಸ ನೀಡುತ್ತಿಲ್ಲ ಹಾಗೂ ಸಂಬಳವನ್ನೂ ಪಾವತಿಸುತ್ತಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅತಿಥಿ ಉಪನ್ಯಾಸಕರಿಗೆ ಅನ್ಯಾಯವಾಗುತ್ತಿದ್ದು, ಸರ್ಕಾರದ ಗಮನ ಸೆಳೆಯಲು ಅನಿರ್ದಿಷ್ಟಾವಧಿ ಧರಣಿ ಕೈಗೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net