ಬಾಕಿ ಗೌರವಧನ ಬಿಡುಗಡೆ ಮಾಡಿ: ಅತಿಥಿ ಉಪನ್ಯಾಸಕರಿಂದ ಎಡಿಸಿಗೆ ಮನವಿ

Manavi)
Published on

ಮಂಡ್ಯ: ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಬಾಕಿ ಉಳಿಸಿಕೊಂಡಿರುವ ಗೌರವಧನವನ್ನು ಬಿಡುಗಡೆ ಮಾಡಿಸುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಆತಿಥಿ ಉಪನ್ಯಾಸಕರ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದ 430 ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ 10500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕ ಬದುಕು ದುಸ್ತರವಾಗಿದೆ. ಫೆಬ್ರವರಿ ತಿಂಗಳಿಂದ ಗೌರವಧನ ಕೊರತೆಯಾಗಿದ್ದು, ಅದನ್ನು ಸರ್ಕಾರ ಬಿಡುಗಡೆ ಮಾಡಿಲ್ಲ. ಪ್ರತಿ ತಿಂಗಳ 10ರೊಳಗೆ ಗೌರವಧನವನ್ನು ಅತಿಥಿ ಉಪನ್ಯಾಸಕರ ಖಾತೆಗೆ ಜಮೆ ಮಾಡಬೇಕೆಂದು 2022ರಲ್ಲಿ ಸರ್ಕಾರವೇ ಅಧಿಸೂಚನೆ ಹೊರಡಿಸಿದೆ. ಆದರೂ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಸಮಸ್ಯೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಂದ ಹಿಡಿದು ಕೆಳಹಂತದ ಸಿಬ್ಬಂದಿವರೆಗೂ ವೇತನ ಬಂದಿದೆ. ಆದರೆ ಅತಿಥಿ ಉಪನ್ಯಾಸಕರಿಗೆ ಆಗದಿರುವುದು ದುರಂತ. ಏಪ್ರಿಲ್ ತಿಂಗಳು ಮುಗಿಯುತ್ತಿರುವುದರಿಂದ ಎಲ್ಲವನ್ನೂ ಸೇರಿಸಿ ಒಟ್ಟಿಗೆ ಗೌರವಧನ ಬಿಡುಗಡೆ ಮಾಡಿದರೆ ಅನುಕೂಲವಾಗಲಿದೆ. ಈ ಸಂಬಂಧ ಸಂಬಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ರಾಜ್ಯ ಚುನಾವಣಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾರೆ.

ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಎಸ್.ನಾಗರಾಜ್ ಮದ್ದೂರು, ಜಂಟಿ ಕಾರ್ಯದರ್ಶಿ ವಿನಯ್‌ಕುಮಾರ್, ಲೋಕೇಶ್, ಸೋಮಶೇಖರ್, ಶ್ರುತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net