ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Published on

ಕೊಪ್ಪಳ : ನಗರದ ದಿಡ್ಡಿಕೇರಿಯಲ್ಲಿನ ಅಲ್ಪಸಂಖ್ಯಾತರ ಮೌಲಾನಾ ಆಜಾದ್​ ಮಾದರಿ ಪಿಯು ಕಾಲೇಜಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ, ಜೀವಶಾಸ್ತ್ರ, ಕನ್ನಡ, ಇಂಗ್ಲೀಷ್​, ಉರ್ದು ವಿಷಯ ಹುದ್ದೆಗಳು ಖಾಲಿ ಇವೆ. ಅಗತ್ಯ ವಿದ್ಯಾರ್ಹತೆ ಹಾಗೂ 2 ವರ್ಷ ಸೇವಾನುಭವ ಹೊಂದಿದ ಆಸಕ್ತರು ಆ.1ರೊಳಗೆ ಕಾಲೇಜಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ 9900617290ಗೆ ಸಂಪರ್ಕಿಸಲು ಪ್ರಾಚಾರ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net